ಸಿದ್ದರಾಮಯ್ಯ
ಸಿದ್ದರಾಮಯ್ಯ

ಪಿಯುಸಿ ಫಲಿತಾಂಶ ಕುಸಿತಕ್ಕೆ ಉಪನ್ಯಾಸಕರ ಕೊರತೆಯೇ ಕಾರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ಸಿದ್ದು ವಾಗ್ದಾಳಿ

ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. 

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕೂಡ ಕಾರಣ ಎನ್ನುವುದು ಸತ್ಯ. ಇದರ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಸಚಿವ ಸುರೇಶ್ ಕುಮಾರ್ ಅವರೇ ವಹಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. 

ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾದ 1,298 ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿತ್ತುಯ ಆದರೆ, ಸುರೇಶ್ ಕುಮಾರ್ ಅವರು ಮಧ್ಯೆ ಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಳ್ಲ. ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯವಾಗಿದೆ ಎಂದು ದೂಷಿಸಿದ್ದಾರೆ. 

ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ, ಕಳೆದ 4 ತಿಂಗಳಿಂದ ಆಡಳಿತಾರೂಢ ಸರ್ಕಾರದಿಂದ ಇಡೀ ಶಿಕ್ಷಣ ಪ್ರಕ್ರಿಯೆಗಳೇ ಸಂಕಷ್ಟಕ್ಕೆ ಸಿಲುಕಿವೆ. 

ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, ಸಿಬ್ಬಂದಿಗಳ ಆಯ್ಕೆ ಅಂತಿಮಗೊಂಡ ಬಳಿಕವೂ ಅವರನ್ನು ಕಾಯುವಂತೆ ಮಾಡಲಾಗುತ್ತಿದೆ. ಉಪನ್ಯಾಸಕರ ಕೊರತೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.  

Related Stories

No stories found.

Advertisement

X
Kannada Prabha
www.kannadaprabha.com