ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ದೇವಿ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ

ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಸಂಸದೆ ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ, ನಾಡದೇವತೆ ದರ್ಶನ ಪಡೆದಿದ್ದಾರೆ. 
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಸಂಸದೆ ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ, ನಾಡದೇವತೆ ದರ್ಶನ ಪಡೆದಿದ್ದಾರೆ. 

ಪ್ರತಿ ವರ್ಷದಂತೆ ಆಷಾಢ ಮಾಸದಲ್ಲಿ ಅವರು ಬೆಟ್ಟವನ್ನು ಬರಿಗಾಲಿನಲ್ಲಿ ಹತ್ತುವ ವಾಡಿಕೆ ಇದ್ದು, ಈ ವರ್ಷವು ಅದನ್ನು ಪೂರ್ಣಗೊಳಿಸಿದ್ದಾರೆ‌. ನಂತರ ಮಾತನಾಡಿದ ಅವರು, ಇಡೀ ವಿಶ್ವ ವ್ಯಾಪಿ ಕೊರೊನಾ ತಾಂಡವವಾಡುತ್ತಿದ್ದು, ಅತೀ ಶೀಘ್ರವೇ ಮಹಾಮಾರಿ ತೊಲಗಲಿ, ನಾಡಿನ ಜನತೆಗೆ ಆರೋಗ್ಯ, ಸುಖ ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರು ಪ್ರತಿ ಆಷಾಢ ಮಾಸದಲ್ಲೂ ಮೈಸೂರಿಗೆ ಬಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತುತ್ತಾರೆ. ಬಳಿಕ ತಾಯಿ ಚಾಮುಂಡಿಯ ದರ್ಶನ ಪಡೆದುಕೊಳ್ಳುತ್ತಾರೆ. ಅದರಂತೆಯೇ ಇಂದು ನಾಲ್ಕನೇ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಶೋಭಾ ಕರಂದ್ಲಾಜೆ ಮುಂಜಾನೆಯೇ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ತಾಯಿಯ ದರ್ಶನ ಪಡೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com