ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ವರ್ಗಾವಣೆ; ಮಂಜುನಾಥ್ ಪ್ರಸಾದ್ ನೇಮಕ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಬಿ.ಎಚ್.ಅನಿಲ್‌ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವವಜನಿಕ ಉದ್ಯಮಗಳ ವಿಭಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
Published: 18th July 2020 02:01 PM | Last Updated: 18th July 2020 02:01 PM | A+A A-

ಅನಿಲ್ ಕುಮಾರ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಬಿ.ಎಚ್.ಅನಿಲ್‌ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವವಜನಿಕ ಉದ್ಯಮಗಳ ವಿಭಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದರಿಂದ ತೆರವಾಗುವ ಆಯುಕ್ತರ ಹುದ್ದೆಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಎನ್.ಮಂಜುನಾಥ್ ಪ್ರಸಾದ್ ಅವರನ್ನು ನೇಮಕಗೊಳಿಸಲಾಗಿದೆ.
ಮಂಜುನಾಥ್ ಪ್ರಸಾದ್ ಅವರು ಈ ಹಿಂದೆ ಕೂಡ ಬಿಬಿಎಂಪಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಇವರಿಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಓಆರ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹುದ್ದೆಗಳನ್ನು ಕೂಡ ನಿರ್ವಹಿಸಲಿದ್ದಾರೆ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.