ಮಧ್ಯಮ ಮತ್ತು ತೀವ್ರ ಕೋವಿಡ್ ಸೋಂಕಿನ ಲಕ್ಷಣವುಳ್ಳವರಿಗೆ ಮಾತ್ರ ಆಸ್ಪತ್ರೆಗೆ ದಾಖಲು: ಆರೋಗ್ಯ ಇಲಾಖೆ

ಕೋವಿಡ್‌ ಸೋಂಕಿಗೆ ಚಿಕಿತ್ಸೆ ಕೋರಿ ಆಸ್ಪತ್ರೆಗೆ ಭೇಟಿ ನೀಡುವ ಹಾಸಿಗೆಯನ್ನು ಲಭ್ಯವಾಗಿಸಲು ತೀವ್ರ ಮತ್ತು ಸಾಮಾನ್ಯ ಪೀಡಿತ ಜನರಿಗೆ ಮಾತ್ರ ಆಸ್ಪತ್ರೆಗೆ ದಾಖಲಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್‌ ಸೋಂಕಿಗೆ ಚಿಕಿತ್ಸೆ ಕೋರಿ ಆಸ್ಪತ್ರೆಗೆ ಭೇಟಿ ನೀಡುವ ಹಾಸಿಗೆಯನ್ನು ಲಭ್ಯವಾಗಿಸಲು ತೀವ್ರ ಮತ್ತು ಸಾಮಾನ್ಯ ಪೀಡಿತ ಜನರಿಗೆ ಮಾತ್ರ ಆಸ್ಪತ್ರೆಗೆ ದಾಖಲಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. 

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಸೋಂಕಿನ ಲಕ್ಷಣವಿಲ್ಲದವರು ಮತ್ತು ಲಘು ಸೋಂಕು ಉಳ್ಳವರಿಗೆ ಕೋವಿಡ್‌ ಕೇರ್‌ ಕೇಂದ್ರಗಳಿಗೆ ದಾಖಲಾಗುವಂತೆ ಇಲ್ಲವೇ ಮನೆಯಲ್ಲಿಯೇ ಪ್ರತ್ಯೇಕವಾಗಿರುವಂತೆ ಸಲಹೆ ನೀಡಬೇಕು ಎಂದು ಆದೇಶ ತಿಳಿಸಿದೆ. 

ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು  ಎಂದು ಇಲಾಖೆ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com