ಕೊರೋನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ: ಸುಮಲತಾ ಅಂಬರೀಷ್ ಮನವಿ

ಕೊರೋನಾ ಸೋಂಕಿನ ಲಕ್ಷಣ ಕಂಡುಬಂದು ನಂತರ ಪರೀಕ್ಷೆ ಮಾಡಿಸಿಕೊಂಡು ಅದರಲ್ಲಿ ಪಾಸಿಟಿವ್ ಬಂದ ಮೇಲೆ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

Published: 18th July 2020 12:59 PM  |   Last Updated: 18th July 2020 01:00 PM   |  A+A-


Sumalatha Ambareesh

ಮಂಡ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಸುಮಲತಾ ಅಂಬರೀಷ್(ಸಂಗ್ರಹ ಚಿತ್ರ)

Posted By : Sumana Upadhyaya
Source : Online Desk

ಬೆಂಗಳೂರು: ಕೊರೋನಾ ಸೋಂಕಿನ ಲಕ್ಷಣ ಕಂಡುಬಂದು ನಂತರ ಪರೀಕ್ಷೆ ಮಾಡಿಸಿಕೊಂಡು ಅದರಲ್ಲಿ ಪಾಸಿಟಿವ್ ಬಂದ ಮೇಲೆ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

ಸುಮಲತಾ ಅಂಬರೀಷ್ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಕೇಳಿಬರುತ್ತಿರುವ ಸುದ್ದಿಗಳಿಗೆ ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿರುವ ಅವರು, ಕೊರೋನಾದಿಂದ ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಹೊಂದಿ ಮತ್ತೆ ಸಾರ್ವಜನಿಕ ಜೀವನಕ್ಕೆ ಮರಳುತ್ತೇನೆ ಎನ್ನುವ ಭರವಸೆಯಿದೆ. ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ವರದಿ ತಿಳಿದ ಬಳಿಕವಷ್ಟೆ. ಸದ್ಯಕ್ಕೆ ಔಷಧಿ ಹಾಗೂ ಸುಶ್ರೂಷೆ ಮುಂದುವರೆದಿದೆ. ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ ಎಂದಿದ್ದಾರೆ.

ಆದರೆ ಕೊರೋನಾ ಸೋಂಕಿತರನ್ನು ಅವಮಾನದಿಂದ ಕಾಣುವ, ನಿಂದಿಸುವ ವರ್ತನೆ ಕಾಣುತ್ತಿದ್ದು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಸೇರಿ ಕೊರೋನಾ ವಿರುದ್ಧ ಹೋರಾಡೋಣ, ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ ಎಂದು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Stay up to date on all the latest ರಾಜ್ಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp