ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟನೆ

ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಮಂಜುನಾಥ್ ಪ್ರಸಾದ್
ಮಂಜುನಾಥ್ ಪ್ರಸಾದ್

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಈಗ ಜಾರಿಯಲ್ಲಿರುವ ಲಾಕ್‌ಡೌನ್ ಮುಗಿದ ಬಳಿಕ ನಗರದಲ್ಲಿ ಲಾಕ್‌ಡೌನ್ ಇರುವುದಿಲ್ಲ. ಲಾಕ್‌ಡೌನ್ ಜಾರಿ  ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಈ ಹಿಂದಿನ ಆಯುಕ್ತರಾಗಿದ್ದ ಅನಿಲ್ ಕುಮಾರ್ ಅವರು ಕೊರೋನಾ ಸೋಂಕು ಹರಡುವುದನ್ನು ತಡೆಯಲು ಲಾಕ್‌ಡೌನ್ ಅನಿವಾರ್ಯ ಎಂದು ಹೇಳಿದ್ದರು. ಅವರನ್ನು ನಿನ್ನೆಯಷ್ಟೇ ಸರ್ಕಾರ ವರ್ಗಾವಣೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com