ಮುಂಗಾರು ಹಂಗಾಮಿಗೆ ನಾರಾಯಣಪುರ ಅಚ್ಚುಕಟ್ಟು ಪ್ರದೇಶಕ್ಕೆ ಮಂಗಳವಾರದಿಂದ ನೀರು

ಹಾಲಿ ಮುಂಗಾರು ಹಂಗಾಮಿಗೆ ಕೃಷ್ಣಾ ಭಾಗ್ಯ ಜಲ ನಿಗಮದಿಂದ ನಾರಾಯಣಪೂರ ವ್ಯಾಪ್ತಿಯ ಅಧಿಸೂಚಿತ ಅಚ್ಚುಕಟ್ಟು ಪ್ರದೇಶಕ್ಕೆ ಮಂಗಳವಾರದಿಂದ ನೀರು ಹರಿಸುವುದಾಗಿ ನಿಗಮ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹಾಲಿ ಮುಂಗಾರು ಹಂಗಾಮಿಗೆ ಕೃಷ್ಣಾ ಭಾಗ್ಯ ಜಲ ನಿಗಮದಿಂದ ನಾರಾಯಣಪೂರ ವ್ಯಾಪ್ತಿಯ ಅಧಿಸೂಚಿತ ಅಚ್ಚುಕಟ್ಟು ಪ್ರದೇಶಕ್ಕೆ ಮಂಗಳವಾರದಿಂದ ನೀರು ಹರಿಸುವುದಾಗಿ ನಿಗಮ ತಿಳಿಸಿದೆ.

ಜುಲೈ ೧೩ ರಂದು ಜರುಗಿದ ೨೦೨೦-೨೧ನೇ ಸಾಲಿನ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಂಡಿದ್ದು, ಮುಂಗಾರು ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸುವುದಾಗಿ ತಿಳಿಸಿದೆ. 

ನೀರು ಹರಿಸುವ ಸಂದರ್ಭದಲ್ಲಿ ಕಾಲುವೆ ಜಾಲದ ಗೇಟ್‌ಗಳಿಗೆ ಹಾನಿ ಮಾಡುವುದು, ಅನಧಿಕೃತವಾಗಿ ಎಸ್ಕೇಪ್‌ಗಳ ಮೂಲಕ ಹಳ್ಳಕ್ಕೆ ನೀರು ಹರಿಸುವುದು, ಸೈಪನ್‌ಗಳ ಮೂಲಕ ಮಣ್ಣಿನ ಏರಿಯಲ್ಲಿ ನೀರನ್ನು ಎತ್ತಿಕೊಳ್ಳುವುದು, ಕಾಲುವೆ ಜಾಲದಲ್ಲಿ ಪಂಪುಗಳ ಮೂಲಕ ನೀರು ಎತ್ತುವುದನ್ನು ನೀರಾವರಿ ಕಾಯ್ದೆಯಡಿ ನಿರ್ಬಂಧಿಸಲಾಗಿದೆ. ಈ ಪರಿಸ್ಥಿತಿ ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಿಗಮ ಎಚ್ಚರಿಕೆ ನೀಡಿದೆ.

ಕಾಲುವೆ ಜಾಲದ ಗೇಟ್‍ಗಳನ್ನು ಹಾನಿ ಮಾಡುವುದು, ಅನಧಿಕೃತವಾಗಿ ಎಸ್ಕೇಪ್‍ಗಳ ಮೂಲಕ ಹಳ್ಳಕ್ಕೆ ನೀರು ಹರಿಸುವುದು, ಸೈಪನ್‍ಗಳ ಮೂಲಕ ಮಣ್ಣಿನ ಏರಿಯಲ್ಲಿ ನೀರನ್ನು ಎತ್ತಿಕೊಳ್ಳುವುದು, ಕಾಲುವೆ ಜಾಲದಲ್ಲಿ ಪಂಪುಗಳ ಮೂಲಕ ನೀರು ಎತ್ತುವುದನ್ನು ನೀರಾವರಿ ಕಾಯ್ದೆಯಡಿ ನಿರ್ಬಂಧಿಸಲಾಗಿದೆ.

ಈ ಪರಿಸ್ಥಿತಿ ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ರೈತರು ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚಿತ ಅಚ್ಚುಕಟ್ಟು ಪ್ರದೇಶದಲ್ಲಿ ಲಘು ನೀರಾವರಿ ಬೆಳೆಗಳನ್ನು ಮಾತ್ರ ಬೆಳೆಯಲು ವಿನಂತಿಸಲಾಗಿದೆ. ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಲು ಹಾಗೂ ಈ ನಿಟ್ಟಿನಲ್ಲಿ ನಿಗಮ ನಿಯಮಿತದ ಅಧಿಕಾರಿಗಳಿಗೆ ಸಹಕಾರ ನೀಡಲು ಕೋರಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com