ವೇಶ್ಯಾವಾಟಿಕೆಗಾಗಿ ಯುವತಿಯರ ಕಳ್ಳಸಾಗಣೆ: ಇದೇ ಮೊದಲ ಬಾರಿಗೆ ಕೆಪಿಐಟಿ ಕಾಯ್ದೆ ಅಡಿ ಮಹಿಳೆಯ ಬಂಧನ

ನಗರದಲ್ಲಿ ವೇಶ್ಯಾವಾಟಿಕೆ ನಡೆಸಲು‌ ಯುವತಿಯರನ್ನು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು‌ ಇದೇ ಮೊದಲ ಬಾರಿಗೆ ಕರ್ನಾಟಕ ಅಕ್ರಮ ಕಳ್ಳಸಾಗಣೆ ತಡೆಗಟ್ಟುವಿಕೆ ಕಾಯ್ದೆ ಅಡಿ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಲ್ಲಿ ವೇಶ್ಯಾವಾಟಿಕೆ ನಡೆಸಲು‌ ಯುವತಿಯರನ್ನು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು‌ ಇದೇ ಮೊದಲ ಬಾರಿಗೆ ಕರ್ನಾಟಕ ಅಕ್ರಮ ಕಳ್ಳಸಾಗಣೆ ತಡೆಗಟ್ಟುವಿಕೆ ಕಾಯ್ದೆ ಅಡಿ ಬಂಧಿಸಿದ್ದಾರೆ.

ಸ್ವಾತಿ ಬಂಧಿತ ಪಿಂಪ್. ನಗರದಲ್ಲಿ ಸ್ವಾತಿ, ವಿವಿಧೆಡೆ ಮಸಾಜ್‌ ಸ್ಪಾಗಳನ್ನು ತೆರೆದು ಈ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಹೀಗಾಗಿ ಹಲವು ಬಾರಿ ಸ್ವಾತಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ, ಈಕೆ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ ಮತ್ತೆ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದರು. ಅಲ್ಲದೆ, ವೇಶ್ಯಾವಾಟಿಕೆಗಾಗಿ ಯುವತಿಯರನ್ನ ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದರು‌ ಎಂಬ ಆರೋಪವು ಕೇಳಿ ಬಂದಿದೆ.

ಹೀಗಾಗಿ ಇಂದು ಸ್ವಾತಿ ಎಂಬ ಪಿಂಪ್ ಅನ್ನು ಮತ್ತೆ ಬಂಧಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು, ಆಕೆಯನ್ನು KPIT ಕಾಯ್ದೆಯ ಅಡಿಯಲ್ಲಿ ಬಂಧಿಸಿದ್ದಾರೆ. ಈ ಕಾಯ್ದೆಯಡಿನ್ವಯ ಒಂದು ವರ್ಷ ಆರೋಪಿಗೆ ಜಾಮೀನು ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com