ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ: ವಿಜಯಪುರದಲ್ಲಿ ಇಬ್ಬರ ಬರ್ಬರ ಕೊಲೆ 

ವಿವಾಹಿತೆಯೊಬ್ಬಳು ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ತಾಲೂಕಿನಲ್ಲಿ ಅಲಿಯಾಬಾದ್ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.

Published: 22nd July 2020 12:30 PM  |   Last Updated: 22nd July 2020 12:35 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : UNI

ವಿಜಯಪುರ: ವಿವಾಹಿತೆಯೊಬ್ಬಳು ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ತಾಲೂಕಿನಲ್ಲಿ ಅಲಿಯಾಬಾದ್ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ. 

ಅಮರನಾಥ್ ಸೊಲ್ಲಾಪುರ (25), ಸುನಿತಾ ತಳವಾರ (35) ಹತ್ಯೆಯಾದವರು. ಸುನಿತಾ ಅವರ ಪತಿ ವರ್ಷಗಳ ಹಿಂದೆ ಸಾವಿಗೀಡಾಗಿದ್ದರು. ನಂತರ‌ ಸುನೀತಾ ಅವರೊಂದಿಗೆ ಯುವಕನೋರ್ವ ಅನೈತಿಕ ಸಂಬಂಧ ಹೊಂದಿದ್ದನು.

ಸುನಿತಾ ಪತಿ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಈಕೆಯ ಜೊತೆ ಯುವಕ ಅನೇಕ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಮಂಗಳವಾರ ರಾತ್ರಿ ಅಮರನಾಥ್ ಮಹಿಳೆಯ ಮನೆಗೆ ಬಂದಿದ್ದಾನೆ. ಈ ವೇಳೆ ಇಬ್ಬರು ತೋಟದ ಮನೆಯಲ್ಲಿ ಅಕ್ರಮ ಸಂಬಂಧ ಹೊಂದಿದ್ದರು. ಆದರೆ ಸುನಿತಾ ತಂದೆ ರಾಮಗೊಂಡ ಮತ್ತು ಅಪ್ರಾಪ್ತ ಮಗ ಮನೆಗೆ ಬಂದಿದ್ದಾರೆ. ಆಗ ಇವರಿಬ್ಬರು ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವುದನ್ನು ನೋಡಿದ್ದಾರೆ.

ಇದರಿಂದ ಸುನಿತಾ ತಂದೆ ಮತ್ತು ಅಪ್ರಾಪ್ತ ಮಗ ಕೋಪಗೊಂಡಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಇಬ್ಬರನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಇಂದು ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದ್ದು, ಅಪ್ರಾಪ್ತ ವಯಸ್ಸಿನ ಮಗ ಹಾಗೂ ಆಕೆಯ ತಂದೆ ರಾಮಗೊಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Stay up to date on all the latest ರಾಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp