ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಬರವಣಿಗೆ: ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಡಿಜಿಪಿಗೆ ದೂರು
ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.
Published: 23rd July 2020 04:19 PM | Last Updated: 23rd July 2020 04:26 PM | A+A A-

ಮುರುಗೇಶ್ ನಿರಾಣಿ
ಬೆಂಗಳೂರು: ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.
ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಬರವಣಿಗೆಯನ್ನು ವಾಟ್ಸ್ಆ್ಯಪ್ ನಲ್ಲಿ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಡಿಜಿಪಿ ಅವರಿಗೆ ದೂರು ನೀಡಿದ್ದಾರೆ.
ಶಾಸಕ ಮುರುಗೇಶ್ ನಿರಾಣಿ ಅವರು ಜು.21ರಂದು ವಾಟ್ಸ್ಆ್ಯಪ್ ಗ್ರೂಪೊಂದರಲ್ಲಿ ಹಿಂದೂ ಧರ್ಮದ ಆರಾಧ್ಯ ದೇವತೆಗಳ ವಿರುದ್ಧ ಅವರು ಅವಹೇಳನಕಾರಿ, ನಿಂದನೆಯ ಪೋಸ್ಟ್ ಅನ್ನು ಫಾರ್ವರ್ಡ್ ಮಾಡಿದ್ದರು. ಇದರಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಕಾಮಾಕ್ಷಿಪಾಳ್ಯ ನಿವಾಸಿ ಎಸ್ ಹನುಮೇಗೌಡ ಎಂಬುವರು ದೂರಿನಲ್ಲಿ ಆಗ್ರಹಿಸಿದ್ದಾರೆ.