ಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ!

ಚಿಕಿತ್ಸೆಗೆ ದಾಖಲಾದ ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ರೋಗಿಯ ಸಂಬಂಧಿಕರು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ನಡೆಸಿದ ಘಟನೆ ನಗರದ ಮಲ್ಲೇಶ್ವರದ ಕೆಸಿ.ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಚಿಕಿತ್ಸೆಗೆ ದಾಖಲಾದ ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ರೋಗಿಯ ಸಂಬಂಧಿಕರು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ನಡೆಸಿದ ಘಟನೆ ನಗರದ ಮಲ್ಲೇಶ್ವರದ ಕೆಸಿ.ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. 

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಶ್ರೀರಾಂಪುರದ 43 ವರ್ಷದ ಮಹಿಳೆ ಭಾನುವಾರ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನಾ ಪರೀಕ್ಷೆ ಮಾಡಿಸಿ, ಐಸಿಯುವಿನಲ್ಲಿ ಬೆಡ್ ಖಾಲಿ ಇಲ್ಲದ ಕಾರಣ ಜನರಲ್ ವಾರ್ಡ್'ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುವಿನಲ್ಲಿ ಚಿಕಿತ್ಸೆ ನೀಡುವಂತೆ ಮಹಿಳೆಯರ ಕುಟುಂಬಸ್ಥರು ಆಗ್ರಹಿಸಿದ್ದರು. 

ಕೊರೋನಾ ವರದಿ ಬಾರದ ಹಿನ್ನೆಲೆಯಲ್ಲಿ ಸಾಮಾನ್ಯ ವಾರ್ಡ್ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಈ ನಡುವೆ ಮಹಿಳೆಗೆ ಮಂಗಳವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಐಸಿಯು ವ್ಯವಸ್ಥೆ ಇಲ್ಲದ ಕಾರಣ ಬೇರೆಡೆ ಕರೆದುಕೊಂಡು ಹೋಗುವಂತೆ ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರಿಗೆ ಸೂಚಿಸಿದ್ದಾರೆ. 

ಕುಟುಂಬಸ್ಥರು ಬೇರೆ ಆಸ್ಪತ್ರೆ ಹುಡು ಕಾಡುತ್ತಿದ್ದಾಗಲೇ ಮಹಿಳೆ ಮೃತಪಟ್ಟಿದ್ದು, ಸಂಬಂಧಿಕರು ಆಕ್ರೋಶಗೊಂಡು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂದು ಹೇಳಲಾಗುತ್ತಿದೆ. 

ಕೆಲ ಸಿಬ್ಬಂದಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದ ಕಾರಣ ಆಸ್ಪತ್ರೆಯಲ್ಲಿ ಐಸಿಯು ಕಾರ್ಯನಿರ್ವಹಿಸುತ್ತಿಲ್ಲ. ಬೇರೆ ಆಸ್ಪತ್ರೆ ಕರೆದೊಯ್ಯುವಂತೆ ತಿಳಿಸಿದ್ದೆವು. ಆದರೆ, ಅದಕ್ಕೆ ಸಂಬಂಧಿಕರು ನಿರಾಕರಿಸಿದ್ದರು. ಮಧ್ಯಾಹ್ನ ವೇಳೆಗೆ ಮಹಿಳೆ ಸಾವನ್ನಪ್ಪಿದ್ದರು. ಬಳಿಕ ಮೃತದೇಹ ತೆಗೆದುಕೊಂಡು ಹೋಗಲು ಮುಂದಾದಾಗ ಬಿಬಿಎಂಪಿ ಕೆಲ ನಿಯಮಗಳನ್ನು ಅನುಸರಿಸಬೇಕಾಗಿರುವುದರಿಂದ ಮೃತದೇಹ ನೀಡಲು ನಾವು ನಿರಾಕರಿಸಿದ್ದೆವು. ಈ ವೇಳೆ ಮಹಿಳೆಯ ಕುಟುಂಬಸ್ಥರು ಮಾತಿನ ಚಕಮಕಿ ನಡೆಸಿದಲು, ಕೆಲವರು ವೈದ್ಯರ ಮೇಲೆ ಹಲ್ಲೆ ಕೂಡ ನಡೆಸಿದರು ಎಂದು ಹಿರಿಯ ವೈದ್ಯರೊಬ್ಬರು ಹೇಳಿದ್ದಾರೆ. 

ಈ ನಡುವೆ ವೈದ್ಯರೊಬ್ಬರು ಘಟನೆಯ ವಿಡಿಯೋ ಮಾಡಿದ್ದು, ಘಟನೆ ಮಂಗಳವಾರ ಸಂಜೆ 4.30ಕ್ಕೆ ನಡೆದಿದೆ ಎನ್ನಲಾಗುತ್ತಿದೆ. 

ವೈದ್ಯರಿಂದ ಯಾವುದೇ ತಪ್ಪುಗಳಾಗದಿದ್ದರೂ ವೈದ್ಯನನ್ನು ತಳ್ಳಿ, ಕೆಟ್ಟ ಶಬ್ಧಗಳಿಂದ ನಿಂದಿಸಿದರು. ಬೇರೆ ಆಸ್ಪತ್ರೆ ಕರೆದೊಯ್ಯುವಂತೆ ತಿಳಿಸಿದರೂ ನಮ್ಮ ಮಾತನ್ನು ಕೇಳಲಿಲ್ಲ. ಸಾವಿಗೆ ನಾವೇ ಕಾರಣ ಎಂದು ಆರೋಪಿಸುತ್ತಿದ್ದಾರೆಂದು ಆಸ್ಪತ್ರೆಯ ಅಧೀಕ್ಷಕ ಡಾ.ಬಿ.ಆರ್.ವೆಂಕಟೇಶಯ್ಯ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com