ಮಕ್ಕಳ ಅಶ್ಲೀಲ ವಿಡಿಯೋ ಅಪ್ ಲೋಡ್: ರೌಡಿಶೀಟರ್ ಕೋಳಿ ಮಂಜ ಬಂಧನ

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ ರೌಡಿಶೀಟರ್ ಓರ್ವನನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 
ಬಂಧಿತ ಆರೋಪಿ
ಬಂಧಿತ ಆರೋಪಿ

ಬೆಂಗಳೂರು: ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ ರೌಡಿಶೀಟರ್ ಓರ್ವನನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಬಂಧಿತ ರೌಡಿ ಶೀಟರ್. ಆರೋಪಿ ಚಾಮರಾಜಪೇಟೆ ಮೂಲದವನಾಗಿದ್ದು, ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಪಿಸಿ ಜಗದೀಶ್ ನೇತೃತ್ವದ ಸಿಸಿಬಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ರೌಡಿಶೀಟರ್, ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದನು. ಬಂಧಿತ ಈ ಹಿಂದೆ 6 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com