ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಚಿವ ಎಸ್‌.ಟಿ.ಸೋಮಶೇಖರ್ ದಿಢೀರ್ ಭೇಟಿ

ಸಹಕಾರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಯಶವಂತಪುರ ಹಾಗೂ ರಾಜರಾಜೇಶ್ವರಿ ನಗರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿಗಳನ್ನು ಅವಲೋಕಿಸಿದರು.

Published: 24th July 2020 12:35 PM  |   Last Updated: 24th July 2020 12:39 PM   |  A+A-


Minister ST somashekar

ಸಚಿವ ಎಸ್‌.ಟಿ.ಸೋಮಶೇಖರ್

Posted By : Manjula VN
Source : UNI

ಬೆಂಗಳೂರು: ಸಹಕಾರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಯಶವಂತಪುರ ಹಾಗೂ ರಾಜರಾಜೇಶ್ವರಿ ನಗರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿಗಳನ್ನು ಅವಲೋಕಿಸಿದರು.

ಕನ್ನಲ್ಲಿ ಹಾಗೂ ಸೂಲಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು, ಸ್ಥಿತಿಗತಿಗಳನ್ನು ವೀಕ್ಷಿಸಿದರು.

ಕೋವಿಡ್ 19 ಸೋಂಕಿತರಿಗೆ ಯಾವ ರೀತಿಯ ವ್ಯವಸ್ಥೆ ಇದೆ? ಆ್ಯಂಬುಲೆನ್ಸ್ ವ್ಯವಸ್ಥೆ ಇದೆಯೇ? ಕೋವಿಡ್ ಸೋಂಕಿತರು ಎಷ್ಟು ಮಂದಿ ಇದ್ದಾರೆ? ಹೋಂ ಕ್ವಾರೆಂಟೇನ್ ನಲ್ಲಿದ್ದವರ ಮೇಲೆ ಯಾವ ರೀತಿ ನಿಗಾ ವಹಿಸಲಾಗುತ್ತಿದೆ? ಔಷಧಗಳ ದಾಸ್ತಾನು ಇದೆಯೇ? ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. 
ಉಪ ವಿಭಾಗಾಧಿಕಾರಿ ಶಿವಣ್ಣ ಸೇರಿದಂತೆ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು. 

ಕೋಕೋಕೋಲಾ ಫೌಂಡೇಶನ್ ಹಾಗೂ ಸಮರ್ಥನಂ ಟ್ರಸ್ಟ್‌ ವತಿಯಿಂದ ಬಿಬಿಎಂಪಿ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿ ಕೊಡಲಾಗುತ್ತಿರುವ ಸ್ಯಾನಿಟೈಸರ್, ಮಾಸ್ಕ್, ಹ್ಯಾಂಡ್ ವಾಶ್ ಸಹಿತ ಆರೋಗ್ಯ ಕಿಟ್ ಅನ್ನು ಹೇರೋಹಳ್ಳಿ ವಾರ್ಡ್ ನಂಬರ್ 72 ರಲ್ಲಿ ಸಾಂಕೇತಿಕವಾಗಿ ಸಚಿವ ಸೋಮಶೇಖರ್ ಅವರು ವಿತರಣೆ ಮಾಡಿದರು.

Stay up to date on all the latest ರಾಜ್ಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp