ಹೊಸ ಕೈಗಾರಿಕಾ ನೀತಿಯಿಂದ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ: ಜಗದೀಶ್ ಶೆಟ್ಟರ್

ಹೊಸ ಕೈಗಾರಿಕಾ ನೀತಿಯಲ್ಲಿ  ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ಹೊಸದಾಗಿ ಸ್ಥಾಪನೆಗೊಳ್ಳುವ ಕೈಗಾರಿಕೆಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಶೇ 70 ರಿಂದ ಶೇ 100 ರಷ್ಟು ಆದ್ಯತೆ ನೀಡುವ ‘ಹೊಸ ಕೈಗಾರಿಕಾ ನೀತಿ 2020–25’ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಹೊಸ ಕೈಗಾರಿಕಾ ನೀತಿಯಲ್ಲಿ  ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸಚಿವ ಸಂಪುಟ ಸಭೆ ನಂತರ ಮಾತನಾಡಿದ ಅವರು ಕೈಗಾರಿಕಾ ವ್ಯಾಜ್ಯ ಕಾಯ್ದೆಯ ಸೆಕ್ಷನ್‌ 25(ಕೆ) ಅಡಿ ಕಾರ್ಮಿಕರ ಮಿತಿಯನ್ನು 100 ರಿಂದ 300 ಕ್ಕೆ ಹೆಚ್ಚಿಸಲಾಗಿದೆ. ಈ ಕಾಯ್ದೆಯ ಪ್ರಕಾರ ಯಾವುದೇ ಉದ್ಯಮ 100 ಅಥವಾ ಅದಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿದ್ದರೆ ಕೈಗಾರಿಕೆ ಮುಚ್ಚಲು, ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲು ಸರ್ಕಾರದ ಅನುಮತಿ ಪಡೆಯಬೇಕಿತ್ತು. ಈಗ ಅದನ್ನು 300ಕ್ಕೆ ಏರಿಕೆ ಮಾಡಿದೆ. 

ವಿದ್ಯುತ್‌ ಬಳಸಿ ನಡೆಸುವ ಸಣ್ಣ ಘಟಕಗಳಲ್ಲಿ ಕಾರ್ಮಿಕರ ಮಿತಿ 10–20 ರಿಂದ 20–40 ಕ್ಕೆ ಹೆಚ್ಚಿಸಲು ಕೈಗಾರಿಕಾ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಫ್ಯಾಕ್ಟರಿ ಕಾಯ್ದೆ 65(3)(4) ಸೆಕ್ಷನ್‌ಗೆ ತಿದ್ದುಪಡಿ ಮಾಡಿ, ಓವರ್ ಟೈಮ್ ‌(ಓ.ಟಿ) ಕೆಲಸದ ಅವಧಿಯನ್ನು ಮೂರು ತಿಂಗಳಿಗೆ 75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ,
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com