ಕಾಮೇಗೌಡರನ್ನು ಮಂಡ್ಯ ವೈದ್ಯಕೀಯ ಕಾಲೇಜಿಗೆ ದಾಖಲಿಸಿಕೊಳ್ಳುವಂತೆ ಸೂಚನೆ: ಸಚಿವ ಕೆ.ಸುಧಾಕರ್

ಕೋವಿಡ್‌–19 ಸೋಂಕಿಗೆ ತುತ್ತಾಗಿರುವ ಕಲ್ಮನೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾದ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಾಮೇಗೌಡರನ್ನು ಮಂಡ್ಯ ವೈದ್ಯಕೀಯ ಕಾಲೇಜಿಗೆ ದಾಖಲಿಸಿಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ಕಲ್ಮನೆ ಕಾಮೇಗೌಡರ
ಕಲ್ಮನೆ ಕಾಮೇಗೌಡರ

ಮಂಡ್ಯ: ಕೋವಿಡ್‌–19 ಸೋಂಕಿಗೆ ತುತ್ತಾಗಿರುವ ಕಲ್ಮನೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾದ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಾಮೇಗೌಡರನ್ನು ಮಂಡ್ಯ ವೈದ್ಯಕೀಯ ಕಾಲೇಜಿಗೆ ದಾಖಲಿಸಿಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್ ಅವರು, 'ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒಡಗಿಸಬೇಕೆಂದು ಸೂಚನೆ ನೀಡಿದ್ದೇನೆ. ಇಡೀ ದೇಶಕ್ಕೆ ಸ್ಪೂರ್ತಿಯಾಗಿರುವ ಕಾಮೇಗೌಡರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು, 'ಕಾಮೇಗೌಡರ ಬಗ್ಗೆ ‘ಮನ್‌ ಕಿ ಬಾತ್‌’ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಕೂಡ ಪ್ರಶಂಸಿಸಿದ್ದಾರೆ. ಅವರನ್ನು ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕು’ ಎಂದು ಮನವಿ ಮಾಡಿದ್ದಾರೆ. 

85 ವರ್ಷ ವಯಸ್ಸಿನ ಕಾಮೇಗೌಡರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com