ಉಡುಪಿ: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನು ಬಡಿದು ಕೊಂದ ವ್ಯಕ್ತಿ!

ಕ್ಷುಲ್ಲಕ ವಿಚಾರಕ್ಕೆ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಉಡುಪಿಯಲ್ಲಿ ಶನಿವಾರ ನಡೆದಿದೆ. 

Published: 25th July 2020 02:07 PM  |   Last Updated: 25th July 2020 02:13 PM   |  A+A-


File photo

ಸಂಗ್ರಹ ಚಿತ್ರ

Posted By : manjula
Source : The New Indian Express

ಉಡುಪಿ: ಕ್ಷುಲ್ಲಕ ವಿಚಾರಕ್ಕೆ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಉಡುಪಿಯಲ್ಲಿ ಶನಿವಾರ ನಡೆದಿದೆ. 

ಹೇಮಂತ್ ಪೂಜಾರಿ (45) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಹೇಮಂತ್ ಹಾಗೂ ಅಲ್ಬರ್ಟ್ ಡಿಸೋಜಾ ಇಬ್ಬರು ಪ್ರತೀನಿತ್ಯ ಮದ್ಯಪಾನ ಮಾಡುತ್ತಿದ್ದರು. ಎಂದಿನಂತೆ ಶುಕ್ರವಾರ ಸಂಜೆ ಕೂಡ ಇಬ್ಬರು ಕುಡಿದಿದ್ದು, ಕ್ಷುಲ್ಲಕ ವಿಚಾರವೊಂದಕ್ಕೆ ಮಾತಿನ ಚಕಮಕಿ ನಡೆದಿದೆ. ಅದರಿಂದ ಕೋಪಗೊಂಡ ಅಲ್ಬರ್ಟ್ ಹೇಮಂತ್ ಮೇಲೆ ಮರದ ಕಟ್ಟಿಗೆಯಿಂದ ಬಡಿದಿದ್ದಾನೆ. 

ಹೊಡೆತದ ತೀವ್ರತೆಗೆ ಹೇಮಂತ್ ಅವರು ಕೂಡಲೇ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ. ಬಳಿಕ ಆತಂಕಗೊಂಡ ಆಲ್ಪರ್ಟ್ ಮೃತದೇಹವನ್ನು ಸುಟ್ಟುಹಾಕಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಕೂಡಲೇ ಸ್ಥಳಕ್ಕೆ ಧಾವಿಸಿದ ಶಿರ್ವ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ರೀಶೈಲ ಮುರಾಗೋಡ್ ಅವರು ಆರೋಪಿ ಆಲ್ಪಟ್'ನನ್ನು ಬಂಧಕನಕ್ಕೊಳಪಡಿಸಿದ್ದಾರೆ. 

ಪ್ರಕರಣ ಸಂಬಂಧ ಆರೋಪಿ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆ 302 ಮತ್ತು 201 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದಾರೆ. ಹತ್ಯೆಯಾದ ವ್ಯಕ್ತಿ ಹಾಗೂ ಆರೋಪಿಗಳು ಈ ಹಿಂದೆ ಕೆಲ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. 


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp