ಉಡುಪಿ ಆಶಾ ಕಾರ್ಯಕರ್ತೆಯ ಕೆಲಸಕ್ಕೆ ವ್ಯಾಪಕ ಪ್ರಶಂಸೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಶ್ಲಾಘನೆ

ಉಡುಪಿಯ ಆಶಾ ಕಾರ್ಯಕರ್ತೆ ರಾಜೀವಿ ಎಂಬವರು ಗರ್ಭಿಣಿ ಮಹಿಳೆಯನ್ನು ರಾತ್ರಿ 3 ಗಂಟೆ ಸುಮಾರಿಗೆ ತನ್ನ ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದ್ದು, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕೂಡ ಈ ಬಗ್ಗೆ ಟ್ವೀಟ್ ಮಾಡಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 
ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು

ಬೆಂಗಳೂರು: ಉಡುಪಿಯ ಆಶಾ ಕಾರ್ಯಕರ್ತೆ ರಾಜೀವಿ ಎಂಬವರು ಗರ್ಭಿಣಿ ಮಹಿಳೆಯನ್ನು ರಾತ್ರಿ 3 ಗಂಟೆ ಸುಮಾರಿಗೆ ತನ್ನ ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದ್ದು, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕೂಡ ಈ ಬಗ್ಗೆ ಟ್ವೀಟ್ ಮಾಡಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬಿಡುವಿನ ಸಮಯದಲ್ಲಿ ಆಟೋ ರಿಕ್ಷಾ ಚಾಲಕಿಯಾಗಿ ಕೆಲಸ ನಿರ್ವಹಿಸುತ್ತಿರುವ ರಾಜೀವಿ ಅವರು ಉಚಿತವಾಗಿ ತನ್ನ ಆಟೋದಲ್ಲಿ ಗರ್ಭಿಣಿ ಮಹಿಳೆಯರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು ಎಲ್ಲರಿಗೂ ಸ್ಫೂರ್ತಿ ನೀಡುವಂತಹ ವಿಷಯ ಎಂದು ವೆಂಕಯ್ಯ ನಾಯ್ಡು ಬಣ್ಣಿಸಿದ್ದಾರೆ.

ಗುರುವಾರ ರಾತ್ರಿ 3 ಗಂಟೆ ಸುಮಾರಿಗೆ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರು ಸ್ಥಳೀಯ ಆಶಾ ಕಾರ್ಯಕರ್ತೆ ರಾಜೀವಿ (53) ಅವರಿಗೆ ಕರೆ ಮಾಡಿದ್ದಾರೆ. ತಕ್ಷಣ ತಮ್ಮ ಆಟೊವನ್ನು ಸ್ವತಃ ಚಲಾಯಿಸಿಕೊಂಡು ಬಂದ ರಾಜೀವಿ ಅವರು ಗರ್ಭಿಣಿಯನ್ನು ಪೆರ್ಣಂಕಿಲ ಗ್ರಾಮದಿಂದ ಉಡುಪಿ ಸರ್ಕಾರಿ ಹೆರಿಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com