ವಿಜಯಪುರ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ: ಒಂದು ವರ್ಷದಲ್ಲಿ ಪೂರ್ಣ-ಗೋವಿಂದ ಕಾರಜೋಳ

ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ  ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ  ನೆರವೇರಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ವಿಜಯಪುರ ವಿಮಾನ ನಿಲ್ದಾಣ ಸ್ಥಳ ಪರಿಶೀಲನೆ ನಡೆಸುತ್ತಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ವಿಜಯಪುರ ವಿಮಾನ ನಿಲ್ದಾಣ ಸ್ಥಳ ಪರಿಶೀಲನೆ ನಡೆಸುತ್ತಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ವಿಜಯಪುರ:ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ  ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ  ನೆರವೇರಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ವಿಜಯಪುರ ವಿಮಾನನಿಲ್ದಾಣದ ಸ್ಥಳಪರಿಶೀಲನೆ ಮಾಡಿದ  ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಪರಂಪರೆ ತಾಣ, ಶೈಕ್ಷಣಿಕ, ತೋಟಗಾರಿಕೆ ಹಾಗೂ  ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶೇಷ ಛಾಪನ್ನು ಹೊಂದಿರುವ ಈ  ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿಸುವುದು ಮುಖ್ಯಮಂತ್ರಿ ಬಿ. ಎಸ್.  ಯಡಿಯೂರಪ್ಪ ಹಾಗೂ ನಮ್ಮೆಲ್ಲರ ಆಶಯವಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ  ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳಲಾಗುವುದು. ಈಗಾಗಲೇ ಮಣ್ಣು ಪರೀಕ್ಷೆ   ಸೇರಿದಂತೆ ಪೂರಕ ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ವಿಮಾನ ನಿಲ್ದಾಣ  ನಿರ್ಮಾಣ ಕಾಮಗಾರಿಯನ್ನು  ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಈ ವಿಮಾನ ನಿಲ್ದಾಣವನ್ನು ಉಡಾನ್ ಯೋಜನೆಯ ವ್ಯಾಪ್ತಿಗೊಳಡಿಸಲು ಶ್ರಮಿಸಲಾಗುತ್ತಿದೆ.   ವಿಮಾನ  ನಿಲ್ದಾಣವು ಈ   ಪ್ರದೇಶದ ಅಭಿವೃದ್ದಿಗೆ ನಾಂದಿಯಾಗಲಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com