ಎಪಿಜೆ ಅಬ್ದುಲ್ ಕಲಾಂ ಪುಣ್ಯತಿಥಿ: ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ

ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್‌ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಅಬ್ದುಲ್ ಕಲಾಂ
ಅಬ್ದುಲ್ ಕಲಾಂ

ಬೆಂಗಳೂರು: ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್‌ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತದ ’ಮಿಸೈಲ್ ಮ್ಯಾನ್’, ದೇಶದ 11ನೇ ರಾಷ್ಟ್ರಪತಿಗಳಾಗಿದ್ದ ಭಾರತರತ್ನ ಎ.ಪಿ.ಜಿ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸೋಣ. ಅವರ ಬದುಕು, ಸಾಧನೆ, ವ್ಯಕ್ತಿತ್ವಗಳು ಆದರ್ಶಪ್ರಾಯವಾಗಿದ್ದು, ಕೋಟ್ಯಂತರ ಜನರಿಗೆ ನಿರಂತರ ಸ್ಫೂರ್ತಿ ನೀಡುತ್ತಿವೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ದೇಶದ ಹೆಮ್ಮೆಯ ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎ ಪಿ ಜೆ ಅಬ್ದುಲ್ ಕಲಾಂ ಅವರ ಪುಣ್ಯ ತಿಥಿಯಂದು ಸ್ಮರಿಸುತ್ತಾ. ವಿಶ್ವ ಕಂಡ ಶ್ರೇಷ್ಠ ವಿಜ್ಞಾನಿ, ದೇಶದ ರಾಷ್ಟ್ರಪತಿಗಳಾಗಿ ಭಾರತ ಮಾತೆಯ ಸೇವೆ ಸಲ್ಲಿಸಿದ ನಿಮಗೆ ಅನಂತ ಕೋಟಿ ನಮನಗಳು ಎಂದು ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಭಾರತದ ಕ್ಷಿಪಣಿ ಪಿತಾಮಹ, ಭಾರತದ 11ನೇ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯ ಸ್ಮರಣೆ ಇಂದು. "ಪ್ರತಿಯೊಬ್ಬರೂ ಜೀವನದಲ್ಲಿ ದುಃಖವನ್ನು ಅನುಭವಿಸುತ್ತಾರೆ, ಈ ದುಃಖವು ಎಲ್ಲರಲ್ಲೂ ತಾಳ್ಮೆಯನ್ನು ಪರೀಕ್ಷಿಸುತ್ತದೆ." ಎಂದು ಹೇಳಿ ಹೋದರು. ಈ ದೇಶದ ಅಭಿವೃದ್ಧಿಗೆ ಮತ್ತೆ ಹುಟ್ಟಿ ಬನ್ನಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿ, ಪೀಪಲ್ಸ್ ಪ್ರೆಸಿಡೆಂಟ್" ಎಂದೇ ಪ್ರಖ್ಯಾತರಾದ, ಭಾರತ ಕಂಡ ಮಹಾನ್ ಚೇತನ, ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಗೌರವ ಪೂರ್ವಕ ನಮನಗಳು. ಅಬ್ದುಲ್ ಕಲಾಂ ಅವರ ಆದರ್ಶಪ್ರಾಯ ಜೀವನವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com