ಐತಿಹಾಸಿಕ, ಜಾಗತಿಕ ಸವಾಲುಗಳ ನಡುವೆ ಪ್ರಗತಿ ಕಂಡ ಬಿಎಸ್‌ವೈ ಸರ್ಕಾರ: ಸಚಿವೆ ಶಶಿಕಲಾ ಜೊಲ್ಲೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಒಂದು ವರ್ಷದಲ್ಲಿ ಹಲವಾರು ಐತಿಹಾಸಿಕ ಸವಾಲುಗಳ ನಡುವೆಯೂ ಆರ್ಥಿಕ ಸ್ಥಿರತೆ ಕಾಪಾಡಲು ಶ್ರಮಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಒಂದು ವರ್ಷದಲ್ಲಿ ಹಲವಾರು ಐತಿಹಾಸಿಕ ಸವಾಲುಗಳ ನಡುವೆಯೂ ಆರ್ಥಿಕ ಸ್ಥಿರತೆ ಕಾಪಾಡಲು ಶ್ರಮಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಬರದ ಛಾಯೆಯಲ್ಲಿದ್ದ ರಾಜ್ಯದಲ್ಲಿ ಕೆಲವೇ ದಿನಗಳೊಳಗೆ ಹಿಂದೆಂದೂ ಕಂಡರಿಯದ ಪ್ರವಾಹ, ಪರಿಹಾರ ವಿತರಣೆ, ಸಮಸ್ಯೆ ನಿವಾರಣೆಗೆ ಮುಖ್ಯಮಂತ್ರಿ ಅವರು ಖುದ್ದು ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ನೇಕಾರರ ಸಾಲ ಮನ್ನಾ ಯೋಜನೆ, ಕಿಸಾನ್ ಸಮ್ಮಾನ್ ನೆರವು, ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ, ಕರ್ನಾಟಕ ಎಂದು ಮರು ನಾಮಕರಣ ಮಾಡಿ, ಈ ಭಾಗದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಿದ್ದು, ಇದಕ್ಕೆ ಪೂರಕವಾಗಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕತಿಕ ಸಂಘ ಸ್ಥಾಪಿಸಿರುವುದು ವಿಶೇಷವಾಗಿದೆ. ಕೋವಿಡ್ ಸಂಕಷ್ಚಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಪ್ರಯತ್ನಿಸಲಾಗಿದೆ. ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಸಲು ಕ್ರಮ ವಹಿಸಿದ್ದಾರೆ ಎಂದು ಶಶಿಕಲಾ ಜೊಲ್ಲೆ ಹೇಳಿದರು.

50 ಲಕ್ಷ ರೈತರಿಗೆ ಅನುಕೂಲ
ಇದೇ ವೇಳೆ ಬಿಎಸ್ ವೈ ಸರ್ಕಾರವನ್ನು ರೈತರ ಪರ ಸರ್ಕಾರ ಎಂದು ಹೇಳಿದ ಜೊಲ್ಲೆ ಅವರು, 'ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ರೈತರ ಹಿತರಕ್ಷಣೆಗೆ ಒತ್ತು ನೀಡಿದೆ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಫಲಾನುಭವಿಗಳಿಗೆ ಸರ್ಕಾರವು ಹೆಚ್ಚುವರಿಯಾಗಿ ₹4 ಸಾವಿರ ನೀಡಿದೆ. ಪಿಎಂ ಕಿಸಾನ್‌–ಕರ್ನಾಟಕ ಯೋಜನೆಯಡಿ 50 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಿದೆ. ರೈತರು ಉತ್ಪನ್ನಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ದರದಲ್ಲಿ ಮಾರಾಟ ಮಾಡಲು ಅನುವು ಮಾಡಿಕೊಡಲು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ನನ್ನ ಬೆಳೆ ನನ್ನ ಹಕ್ಕು ಚಿಂತನೆ ಸಾಕಾರಗೊಳಿಸಿದ ಹೆಗ್ಗಳಿಕೆ ನಮ್ಮದು. ಪ್ರವಾಹ ಸಂದರ್ಭದಲ್ಲಿ ತ್ವರಿತ ಮತ್ತು ಪಾರದರ್ಶಕವಾಗಿ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಲಾಯಿತು. ಕೇಂದ್ರ ಸರ್ಕಾರ 1,869 ರೂ ಕೋಟಿ ಪರಿಹಾರ ಒದಗಿಸಿದೆ. ಮೂಲಸೌಕರ್ಯ ದುರಸ್ತಿ ಮತ್ತಿತರ ಪರಿಹಾರ ಕಾರ್ಯಗಳಿಗೆ ಸರ್ಕಾರ 6,108 ಕೋಟಿ ರೂ ಮಂಜೂರು ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com