ಬಿಮ್ಸ್'ನಲ್ಲಿ ಸಿಲಿಂಡರ್ ಸ್ಫೋಟ: ವೈದ್ಯಕೀಯ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಳಗಾವಿ ಜಿಲ್ಲಾಸ್ಪತ್ರೆ (ಬಿಮ್ಸ್)ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಳಗಾವಿ ಜಿಲ್ಲಾಸ್ಪತ್ರೆ (ಬಿಮ್ಸ್)ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. 

ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸೆ ಘಟಕದಲ್ಲಿ ರೋಗಿಗೆ ಆಕ್ಸಿಜನ್ ಹಚ್ಚುವಾಗ ಸಿಲಿಂಡರ್ ಗ್ಯಾಸ್ ಮತ್ತು ಸ್ಯಾನಿಟೈಸರ್ ಕೂಡಿಕೊಂಡಿದ್ದರಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿದೆ. 

ಇದರಿಂದ ಕರ್ತವ್ಯದಲ್ಲಿದ್ದ ಓರ್ವ ವೈದ್ಯ ಹಾಗೂ ವಾರ್ಡ್ ಬಾಯ್ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಕೊರೋನಾ ವೈರಸ್ ತೀವ್ರತೆ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಪಿಪಿಇ ಕಿಟ್ ಧರಿಸಿದ್ದರಿಂದ ಸಿಲಿಂಡರ್ ನಿಂದ ಹೊತ್ತಿಕೊಂಡ ಬೆಂಕಿ ಪ್ಲಾಸ್ಟಿಕ್ ನಿಂದ ಸಿದ್ಧವಾಗಿರುವ ಪಿಪಿಇ ಕಿಟ್'ಗೆ ಹೊತ್ತಿಕೊಂಡಿದೆ. 

ಬೆಂಕಿಯಿಂದ ಪ್ಲಾಸ್ಟಿಕ್ ಸುಟ್ಟು ಕರಗಿದ್ದರಿಂದ ಚರ್ಮದ ಮೇಲೆ ಸೋರಿಕೆಯಾಗಿ ವೈದ್ಯರಿಗೆ ಗಾಯವಾಗಿದೆ. ಈ ಮಾಹಿತಿ ತಿಳಿದ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲಿಸಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆಯೇ ಸಿಲಿಂಡರ್ ಸ್ಫೋಟವಾಗಿದೆ ಎಂದು ಜನ ಭಯಭೀತರಾಗಿ ಓಡಾಡಿದ್ದರಿಂದ, ಜಿಲ್ಲಾಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಹಾಗೂ ಆಸ್ಪತ್ರೆ ಸಿಬ್ಬಂದಿ ಜನರಲ್ಲಿನ ಆತಂಕವನ್ನು ದೂರ ಮಾಡುವ ನಿಟ್ಟಿನಲ್ಲಿ ಶ್ರಮಿಸಬೇಕಾಯಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com