ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಮಹಿಳಾ ಕೆಎಎಸ್ ಅಧಿಕಾರಿ ವಿರುದ್ಧ ದೂರು ದಾಖಲು

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಆರೋಪದಡಿ ಮಹಿಳಾ ಕೆಎಎಸ್ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ.

Published: 28th July 2020 06:37 PM  |   Last Updated: 28th July 2020 06:37 PM   |  A+A-


complete lockdown in Bengaluru

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ಬೆಂಗಳೂರು: ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಆರೋಪದಡಿ ಮಹಿಳಾ ಕೆಎಎಸ್ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ.

ಕೆಎಎಸ್​ ಅಧಿಕಾರಿ ಡಾ.ಕೆ.ಎನ್.ಅನುರಾಧ ವಿರುದ್ಧ ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಐಎಡಿಬಿ ಎಡಿಸಿ ಆಗಿರುವ ಅನುರಾಧ ಅವರು ಜು. 26ರ ರವಿವಾರ ಲಾಕ್​​​​ಡೌನ್ ನಡುವೆಯೂ ಬೆಂಗಳೂರಿನಿಂದ ಕೆ.ಆರ್ ಪುರಂ ಮಾರ್ಗವಾಗಿ ಖಾಸಗಿ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಅಜಾಗರೂಕತೆ ಚಾಲನೆಯಿಂದ ಕಾರು ಮೆಟ್ರೋ ಬ್ಯಾರಿಕೇಡ್​​ಗೆ ಡಿಕ್ಕಿ ಹೊಡೆದು ಜಖಂಗೊಂಡಿತ್ತು.

ಘಟನೆಯಲ್ಲಿ ಅನುರಾಧ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದರು. 

ಸದ್ಯ ಕೆ ಆರ್ ಪುರಂ ಪೊಲೀಸರು ಖಾಸಗಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp