ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

ಗೋಕಳ್ಳರನ್ನು ಪೋಲೀಸರಿಗೆ ಒಪ್ಪಿಸುವಂತೆ ಆಗ್ರಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. 
ಸಿಂಧೂ ಬಿ, ರೂಪೇಶ್
ಸಿಂಧೂ ಬಿ, ರೂಪೇಶ್

ಮಂಗಳೂರು: ಗೋಕಳ್ಳರನ್ನು ಪೋಲೀಸರಿಗೆ ಒಪ್ಪಿಸುವಂತೆ ಆಗ್ರಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. 

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಸಿಂಧೂ ಬಿ, ರೂಪೇಶ್ ಆವರು ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೋಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಲಬಾರದು ಎಂದು ಹೇಳಿದ್ದರು. ಅಲ್ಲದೆ ಜಾನುವಾರು ಸಾಗಾಟ ಮಾಡುವ ವಾಹನದ ಹಾಗೂ ಜನರ ಮೇಲೆ ಹಲ್ಲೆ ನಡೆಸಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಲಲಾಗುತ್ತದೆ ಎಂದೂ ಅವರು ಹೇಳಿದ್ದರು.

ಈ ವಿಚಾರ ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾಧಿಕಾರಿಗಳನ್ನು ಕೊಲೆ ಮಾಡಬೇಕು ಎಂದು ತುಳುವಿನಲ್ಲಿ ಹಾಕಿದ್ದ ಪೋಸ್ಟ್ ಒಂದು ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಕಟವಾಗಿದ್ದು ಇದೀಗ ವೈರಲ್ ಆಗಿದೆ. 

ಈ ಬಗ್ಗೆ ಪ್ರತಿಕ್ರಯಿಸಿರುವ ಮಂಗಳೂರು ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಅರುಣಾಂಶಗಿರಿ "ಈಗಾಗಾಲೇ ಈ ಬಗ್ಗೆ ತನಿಖೆ ಪ್ರಾರಂಭವಾಗಿದೆ. ಜಿಲ್ಲಾಧಿಕಾರಿ ಜತೆ ಮಾತಾಡಿದ್ದೇವೆ. ದೂರು ನೀಡಿದರೆ ಸ್ವೀಕರಿಸಲಾಗುತ್ತದೆ. ಇಲ್ಲದೆ ಹೋದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲಾಗುತ್ತದೆ. ಹಾಗೆಯೇ ಯಾವ ಕಾರಣಕ್ಕೂ ಇದನ್ನು ಕಡೆಗಣಿಸಲಾಗುವುದಿಲ್ಲ" ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com