ಆತ್ಮ ನಿರ್ಬರ್ ನಿಧಿ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತಷ್ಟು ಉತ್ತೇಜನ ನೀಡಿ: ಸಿಎಂಗೆ ನಡ್ಡಾ ಸೂಚನೆ

ಆತ್ಮ ನಿರ್ಬರ್ ನಿಧಿ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತಷ್ಟು ಉತ್ತೇಜನ ನೀಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ. ನಡ್ಡಾ ಅವರು ಮಂಗಳವಾರ ಸೂಚನೆ ನೀಡಿದ್ದಾರೆ. 
ಸಭೆಯಲ್ಲಿ ಮಾತುಕತೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ
ಸಭೆಯಲ್ಲಿ ಮಾತುಕತೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ

ಬೆಂಗಳೂರು: ಆತ್ಮ ನಿರ್ಬರ್ ನಿಧಿ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತಷ್ಟು ಉತ್ತೇಜನ ನೀಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ. ನಡ್ಡಾ ಅವರು ಮಂಗಳವಾರ ಸೂಚನೆ ನೀಡಿದ್ದಾರೆ. 

ನಿನ್ನೆಯಷ್ಟೇ ಬಿಜೆಪಿ ಆಡಳಿತಾರೂಢ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಸಭೆಯಲ್ಲಿ ಭಾಗವಿಸಿದ್ದ ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ ನಡ್ಡಾ ಅವರು, ಆತ್ಮ ನಿರ್ಬರ್ ನಿಧಿ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಕಾರ್ಯಗಳನ್ನು ಮಾಡುವಂತೆ ಸೂಚಿಸಿದರು. 

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಕ್ರೋ ಕ್ರೆಡಿಟ್ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದ ಮೂರು ದಿನ ಬಳಿಕ ಈ ಸಭೆ ನಡೆದಿದೆ. ಆರಂಭದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿತ್ತು. ನಂತರ ನಡ್ಡಾ ಅವರು ಸಭೆಯಲ್ಲಿ ಸಂವಾದ ನಡೆಸಿದರು. 

ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಸುಗಮಗೊಳಿಸಲು, ಡೆಟಾಬೇಸ್ ರಚಿಸುವಂತೆ ಹಾಗೂ  ಈ ಮೂಲಕ ಅಗತ್ಯವಿರುವವರಿಗೆ ಆನ್‌ಲೈನ್ ಅರ್ಜಿಗಳ ಮೂಲಕ ಸಹಾಯ ಮಾಡುವಂತೆ ಯಡಿಯೂರಪ್ಪ ಅವರಿಗೆ ನಡ್ಡಾ ತಿಳಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಬಡ್ಡಿ ರಹಿತ ಸಾಲ ಯೋಜನೆ ಬಡವರ ಬಂಧುವನ್ನು ಇದೇ ವೇಳೆ ನಡ್ಡಾ ಅವರು ಶ್ಲಾಘಿಸಿದ್ದಾರೆನ್ನಲಾಗಿದೆ. 

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ್ ನಾರಾಯಣ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com