ನಿಯಮ ಗಾಳಿಗೆ ತೂರಿ ರೋಗಿಗಳಿಂದ ಲಕ್ಷ ಲಕ್ಷ ಹಣ ವಸೂಲಿ; ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆ ವಿರುದ್ಧ ಕ್ರಮ: ಸರ್ಕಾರ

ನಟಿ ಸುಧಾರಾಣಿ ಅವರ ಅಣ್ಣನ ಪುತ್ರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯಲಿಲ್ಲ ಎಂಬ ಸುದ್ದಿ ಹಸಿರಾಗಿರುವಂತೆಯೇ ಇತ್ತ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆ ವಿರುದ್ಧ ಗರಂ ಆಗಿರುವ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
ಕೋವಿಡ್ ಬಿಲ್
ಕೋವಿಡ್ ಬಿಲ್

ಬೆಂಗಳೂರು: ನಟಿ ಸುಧಾರಾಣಿ ಅವರ ಅಣ್ಣನ ಪುತ್ರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯಲಿಲ್ಲ ಎಂಬ ಸುದ್ದಿ ಹಸಿರಾಗಿರುವಂತೆಯೇ ಇತ್ತ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆ ವಿರುದ್ಧ ಗರಂ ಆಗಿರುವ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಹೌದು.. ನಿಯಮ ಗಾಳಿಗೆ ತೂರಿ ರೋಗಿಗಳಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು, 'ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್‌ ಮಾಡಿದ್ದೇನೆ. ಆದರೂ ಇಂದು ಕೊರೊನಾ ರೋಗಿಗೆ 5 ಲಕ್ಷ ಬಿಲ್‌ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಯಿತು ಎಂದು ಹೇಳಿದ್ದಾರೆ.

ಅಂತೆಯೇ 'ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆ ಆಡಳಿತ ಮಂಡಳಿ, ನಿಗದಿ ಮಾಡಿರುವ ದರಕ್ಕಿಂತಲೂ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದುಇಂದು ಆ ಖಾಸಗಿ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com