ಲೈಫ್ ಸೈನ್ಸ್ ಪಾರ್ಕ್'ನಿಂದ 50 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ: ಸಿಎಂ ಯಡಿಯೂರಪ್ಪ

150ಕ್ಕೂ ಹೆಚ್ಚು ಜೈವಿಕ ತಂತ್ರಜ್ಞಾನ ಸ್ಥಾಪನೆಗೆ ಅನುವು ಮಾಡಿಕೊಡುವ ಲೈಫ್ ಸೈನ್ಸ್ ಕಂಪನಿ ಪಾರ್ಕ್ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 150ಕ್ಕೂ ಹೆಚ್ಚು ಜೈವಿಕ ತಂತ್ರಜ್ಞಾನ ಸ್ಥಾಪನೆಗೆ ಅನುವು ಮಾಡಿಕೊಡುವ ಲೈಫ್ ಸೈನ್ಸ್ ಕಂಪನಿ ಪಾರ್ಕ್ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. 

ಎಲೆಕ್ಟ್ರಾನಿಕ್ ಸಿಟಿ ಸಮೀಪ ಲ್ಯಾಬ್ ಝೋನ್ ಎಲೆಕ್ಟ್ರಾನಿಕ್ ಸಿಟಿ ಪ್ರೈ.ಲಿ ಈ ಪಾರ್ಕನ್ನು ಅಭಿವೃದ್ಧಿಪಡಿಸಿದೆ. ಪಾರ್ಕ್'ಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರು ಲೈಫ್ ಸೈನ್ಸ್ ಪಾರ್ಕ್ ಸ್ಥಾಪನೆಯಿಂದ 150ಕ್ಕೂ ಹೆಚ್ಚು ಕಂಪನಿಗಳು ಈ ಪಾರ್ಕ್'ನಲ್ಲಿ ನೆಲೆಗೊಳ್ಳಲಿವೆ. ನೂರಕ್ಕೂ ಹೆಚ್ಚು ನವೋದ್ಯಮಗಳು ಸ್ಥಾಪನೆಯಾಗಲಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲಿವೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದ ಅಭ್ಯುದಯಕ್ಕೆ ಅಗತ್ಯ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಲಾಗುವುದು ಹಾಗೂ ಕರ್ನಾಟಕವು ಜಾಗತಿಕ ಬಿಟಿ ಹಬ್ ಆಗಿ ಹೊರಹೊಮ್ಮುವುದಕ್ಕೆ ಬೇಕಾದ ಸರ್ವಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com