ಕೋವಿಡ್ ಕೇರ್ ಕೇಂದ್ರದಲ್ಲಿಯೇ ಸಿಇಟಿ ಬರೆಯಲಿದ್ದಾರೆ 41 ಮಂದಿ ಕೊರೋನಾ ಪಾಸಿಟಿವ್ ವಿದ್ಯಾರ್ಥಿಗಳು!

ವೃತ್ತಿ ಶಿಕ್ಷಣ ಕೋರ್ಸ್'ಗಳ ಪ್ರವೇಶಾತಿ ಸಂಬಂಧ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸುವಂತೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿರುವ ಹಿನ್ನೆಲೆಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ 41 ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಕೇಂದ್ರದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವೃತ್ತಿ ಶಿಕ್ಷಣ ಕೋರ್ಸ್'ಗಳ ಪ್ರವೇಶಾತಿ ಸಂಬಂಧ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸುವಂತೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿರುವ ಹಿನ್ನೆಲೆಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ 41 ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಕೇಂದ್ರದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ. 

ಕಂಟೈನ್ಮೆಂಟ್ ವಲಯದಲ್ಲಿರುವವರಿಗೂ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗುವುದು. ಹಾಲ್ ಟಿಕೆಟ್ ತೋರಿಸಿದರೆ, ಕಂಟೈನ್ಮೆಂಟ್ ವಲಯದಿಂದ ಹೊರಗೆ ಬರಲು ಅವಕಾಶ ನೀಡಲಾಗುತ್ತದೆ. ಅಲ್ಲಿಂದ ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅನ್ಯ ರಾಜ್ಯ 1881 ವಿದ್ಯಾರ್ಥಿಗಳನ್ನು ಬಿಸಿನೆಸ್ ಪ್ರಯಾಣಿಕರೆಂದು ಪರಿಗಣಿಸಿ ಕ್ವಾರಂಟೈನ್'ನಿಂದ ವಿನಾಯಿತಿ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಪ್ರಸ್ತುತ ಸಿಇಟಿ ಬರೆಯಲಿರುವ 41 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕಿದ್ದು, ವೈದ್ಯಕೀಯ ಪ್ರಮಾಣಪತ್ರ ನೀಡದಿದ್ದರೂ ಪರೀಕ್ಷೆ ಬರೆಯಲು ಜಾಗೃತೆವಹಿಸಿ ಅವಕಾಶ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಮಾಹಿತಿ ಹೇಳಿದೆ. 

ಕೋವಿಡ್ ಕೇರ್ ಕೇಂದ್ರದಲ್ಲಿ ಇನ್ವಿಜಿಲೇಟರ್‌ಗಳು ಎರಡು ಪಾಳಿಯಲ್ಲಿ ಭೇಟಿ ನೀಡುತ್ತಾರೆ. ಅಧಿಕಾರಿಗಳಿಗೆ ಪಿಪಿಇ ಕಿಟ್ ಗಳನ್ನು ನೀಡಲಾಗುತ್ತಿದೆ. ಪರೀಕ್ಷೆ ವೇಳೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com