ಸಚಿವ ಶ್ರೀರಾಮುಲು ಭರವಸೆ: ಆಂತರಿಕ ಸಭೆ ಬಳಿಕ ಮುಷ್ಕರ ಹಿಂಪಡೆಯುತ್ತೇವೆಂದ ಆಶಾ ಕಾರ್ಯಕರ್ತೆಯರು

ಮಾಸಿಕ ರೂ.12 ಸಾವಿರ ಗೌರವ ಧನ ನೀಡುವ ಕುರಿತು ಮುಂದಿನ ಎರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಆಂತರಿಕ ಸಭೆ ಬಳಿಕ ಮುಷ್ಕರ ಹಿಂಪಡೆಯುವ ಕುರಿತು ನಿರ್ಧಾರ ಕೈಗೊಳ್ಳುತ್ತೇವೆಂದು ಆಶಾ ಕಾರ್ಯಕರ್ತೆಯರು ಹೇಳಿದ್ದಾರೆ. 
ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರು
ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರು

ಬೆಂಗಳೂರು: ಮಾಸಿಕ ರೂ.12 ಸಾವಿರ ಗೌರವ ಧನ ನೀಡುವ ಕುರಿತು ಮುಂದಿನ ಎರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಆಂತರಿಕ ಸಭೆ ಬಳಿಕ ಮುಷ್ಕರ ಹಿಂಪಡೆಯುವ ಕುರಿತು ನಿರ್ಧಾರ ಕೈಗೊಳ್ಳುತ್ತೇವೆಂದು ಆಶಾ ಕಾರ್ಯಕರ್ತೆಯರು ಹೇಳಿದ್ದಾರೆ. 

ರಾಜ್ಯದಾದ್ಯಂತ 42 ಸಾವಿರ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗೆ ಸರ್ಕಾರ ಸ್ಪಂದನೆ ನೀಡಿದ ಹಿನ್ನೆಲೆಯಲ್ಲಿ ಬುಧವಾರ ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದರು. ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. 

ಅದೇ ರೀತಿಯಲ್ಲಿಯೇ ಬೆಂಗಳೂರಿನ ಮೌರ್ಯ ವೃತ್ತದಲ್ಲಿಯೂ ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಬಂದ ಸಚಿವ ಶ್ರೀರಾಮುಲು ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿ ಎರಡು ದಿನಗಳೊಳಗೆ ನಿರ್ಧಾರ ಪ್ರಕಟಿಸುವುದಾಗಿ ಭರವಸೆ ನೀಡಿದರು. 

ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕಾಯಲು ಹಾಗೂ ಆಂತರಿಕ ಸಭೆ ನಡೆಸಿದ ಬಳಿಕ ಮುಷ್ಕರ ಹಿಂಪಡೆಯುವ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com