ರಾಷ್ಟ್ರೀಯ ಶಿಕ್ಷಣ ನೀತಿ 2020: ಜಾರಿ ಬಗ್ಗೆ ಮೊದಲ ಸಭೆ ನಡೆಸಿದ ರಾಜ್ಯ ಸರ್ಕಾರ

ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ-2020ಕ್ಕೆ ಅನುಮೋದನೆ ನೀಡಿದ ನಂತರ ರಾಜ್ಯ ಸರ್ಕಾರ ನಿನ್ನೆ ಈ ಬಗ್ಗೆ ತಜ್ಞರೊಂದಿಗೆ ಸಭೆ ನಡೆಸಿತ್ತು.
ಡಾ ಸಿ ಎನ್ ಅಶ್ವಥ ನಾರಾಯಣ
ಡಾ ಸಿ ಎನ್ ಅಶ್ವಥ ನಾರಾಯಣ

ಬೆಂಗಳೂರು:ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ-2020ಕ್ಕೆ ಅನುಮೋದನೆ ನೀಡಿದ ನಂತರ ರಾಜ್ಯ ಸರ್ಕಾರ ನಿನ್ನೆ ಈ ಬಗ್ಗೆ ತಜ್ಞರೊಂದಿಗೆ ಸಭೆ ನಡೆಸಿತ್ತು.

ಹಂತ ಹಂತವಾಗಿ ಶಿಕ್ಷಣ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿರುವ ಕರ್ನಾಟಕ ಸರ್ಕಾರ, ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ ನಿನ್ನೆ ನಿವೃತ್ತ ಐಎಎಸ್ ಅಧಿಕಾರಿ ಎಸ್ ವಿ ರಂಗನಾಥ್ ಅವರ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿದ್ದರು.

ಕೇಂದ್ರದ ನೂತನ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಮೊದಲ ಬಾರಿಗೆ ಜಾರಿಗೆ ತರಬೇಕು ಎಂಬ ಬಯಕೆಯಲ್ಲಿರುವ ರಾಜ್ಯ ಸರ್ಕಾರ ಅದರ ಜಾರಿ ಕುರಿತು ಸಚಿವ ಅಶ್ವಥ ನಾರಾಯಣ ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಸಿದರು. ಸಭೆಯ ವೇಳೆ, ಪವರ್ ಪಾಯಿಂಟ್ ಪ್ರಸಂಟೇಶನ್ ನ್ನು ಆಗಸ್ಟ್ 16ರಂದು ಪ್ರಸ್ತುತಪಡಿಸಲು ನಿರ್ಧರಿಸಲಾಯಿತು. ಕಾರ್ಯಪಡೆಗೆ ವಿಸ್ತೃತ ವರದಿಯನ್ನು ಆಗಸ್ಟ್ 20ರಂದು ಸಲ್ಲಿಸಲು ಉಪ ಮುಖ್ಯಮಂತ್ರಿಗಳು ಸೂಚಿಸಿದರು.

ಶಿಕ್ಷಣ ನೀತಿಯ ಕರಡು ಕೇಂದ್ರ ಸರ್ಕಾರದಿಂದ ಹೊರಬಿದ್ದ ಕೂಡಲೇ ಮೂರು ತಿಂಗಳ ಹಿಂದೆ ರಾಜ್ಯ ಸರ್ಕಾರ ಕಾರ್ಯಪಡೆಯನ್ನು ರಚಿಸಿತ್ತು.

ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟದ ಸಂಪೂರ್ಣ ಬೆಳವಣಿಗೆಗೆ ಹೊಸ ಶಿಕ್ಷಣ ನೀತಿ ಒತ್ತು ನೀಡಲಿದೆ. ನವ ಭಾರತ ನಿರ್ಮಾಣದಲ್ಲಿ ಈ ಶಿಕ್ಷಣ ನೀತಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಡಾ ಸಿ ಎನ್ ಅಶ್ವಥ ನಾರಾಯಣ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com