ಲಾಕ್ ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನಲ್ಲಿ ಹೆಚ್ಚಾದ ಕೊರೋನಾ: ಕಂಟೈನ್ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆ

ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರ ಪ್ರಮಾಣದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆಯಾಗಿದೆ. ಕಳೆದ ಒಂದೇ ದಿನದಲ್ಲಿ 7 ವಾರ್ಡ್ ಗಳು ಕಂಟೈನ್ಮೆಂಟ್ ವಲಯಕ್ಕೆ ಸೇರ್ಪಡೆಯಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರ ಪ್ರಮಾಣದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆಯಾಗಿದೆ. 
ಕಳೆದ ಒಂದೇ ದಿನದಲ್ಲಿ 7 ವಾರ್ಡ್ ಗಳು ಕಂಟೈನ್ಮೆಂಟ್ ವಲಯಕ್ಕೆ ಸೇರ್ಪಡೆಯಾಗಿವೆ.

ದಾಸರಹಳ್ಳಿ, ಬೊಮ್ಮನಹಳ್ಳಿ ವಲಯದ ಎಚ್‌ಎಸ್‌ಆರ್‌ ಬಡಾವಣೆ ಮತ್ತು ಬೊಮ್ಮನಹಳ್ಳಿ ವಾರ್ಡ್‌, ಮಹದೇವಪುರ ವಲಯದ ಕಾಡುಗೋಡಿ, ಪೂರ್ವ ವಲಯದ ಅಗರ, ದಕ್ಷಿಣ ವಲಯದ ಸಿದ್ದಾಪುರ, ಹೊಸಹಳ್ಳಿ ಹಾಗೂ ದಾಸರಹಳ್ಳಿ ವಲಯದ ಚೊಕ್ಕಸಂದ್ರ ವಾರ್ಡ್ ಗಳಲ್ಲಿ ಕೊರೋನಾ ಸೋಂಕಿತರು ಕಾಣಿಸಿಕೊಂಡಿದ್ದರಿಂದ ಕಂಟೈನ್‌ಮೆಂಟ್‌ ಪ್ರದೇಶಗಳಾಗಿ ಗುರುತಿಸಿಕೊಂಡಿವೆ. 

ಕಳೆದ ಕೆಲ ದಿನಗಳಿಂದ ಯಾವುದೇ ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಕೆ.ಆರ್‌.ಮಾರುಕಟ್ಟೆ ವಾರ್ಡ್‌, ಬೇಗೂರು ವಾರ್ಡ್‌ ಹಾಗೂ ಬಿಟಿಎಂ ಬಡಾವಣೆ ಕಂಟೈನ್ಮೆಂಟ್ ಪಟ್ಟಿಯಿಂದ ಹೊರಗುಳಿಯಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com