ಬಿಬಿಎಂಪಿ ಅಧಿಕಾರಿಗೆ ಕೊರೋನಾ ಸೋಂಕು ತಗುಲಿಲ್ಲ: ಬಿಬಿಎಂಪಿ ಸ್ಪಷ್ಟನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗೆ ಕೊರೋನಾ ಸೋಂಕು ತಗುಲಿಲ್ಲ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ
ಬಿಬಿಎಂಪಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗೆ ಕೊರೋನಾ ಸೋಂಕು ತಗುಲಿಲ್ಲ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬಿಬಿಂಎಪಿಯಲ್ಲಿ ಕೊರೊನಾ ಕರ್ತವ್ಯದಲ್ಲಿ ತೊಡಗಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಯೋರ್ವರಿಗೆ ಸೋಂಕು ತಗುಲಿದೆ ಎಂಬ ವರದಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕಚೇರಿಯ ನೆಲಮಹಡಿ ಮತ್ತು ಮೊದಲನೇ ಮಹಡಿಯನ್ನು ಮುಚ್ಚಿ ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಲಾಗಿತ್ತು. 

ಆದರೆ, ನಂತರ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) ಮತ್ತು ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ವರದಿ ನೆಗೆಟೀವ್ ಬಂದಿದೆ, ಮತ್ತು ಅಧಿಕಾರಿಗೆ ಸೋಂಕು ಇಲ್ಲದಿರವುದು ದೃಢಪಟ್ಟಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ವಿಜೇಂದ್ರ ಸ್ಪಷ್ಟೀಕರಣ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com