ಕೊರೋನಾ: ನಿಯಮ ಉಲ್ಲಂಘಿಸುವ ವಕೀಲರ ವಿರುದ್ಧ ಬಾರ್ ಕೌನ್ಸಿಲ್ ಕ್ರಮ ಕೈಗೊಳ್ಳಬೇಕು- ಹೈಕೋರ್ಟ್

ಕಲಾಪಗಳ ನಿರ್ವಹಣೆಗೆ ರೂಪಿಸಲಾಗಿರುವ ಮಾರ್ಗಸೂಚಿ (ಎಸ್ಒಪಿ)ಗಳನ್ನು ಉಲ್ಲಂಘನೆ ಮಾಡುವ ವಕೀಲರ ವಿರುದ್ಧ ಕರ್ನಾಟಕ ಬಾರ್ ಕೌನ್ಸಿಲ್ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ಮಂಗಳವಾರ ಹೇಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಲಾಪಗಳ ನಿರ್ವಹಣೆಗೆ ರೂಪಿಸಲಾಗಿರುವ ಮಾರ್ಗಸೂಚಿ (ಎಸ್ಒಪಿ)ಗಳನ್ನು ಉಲ್ಲಂಘನೆ ಮಾಡುವ ವಕೀಲರ ವಿರುದ್ಧ ಕರ್ನಾಟಕ ಬಾರ್ ಕೌನ್ಸಿಲ್ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ಮಂಗಳವಾರ ಹೇಳಿದೆ. 

ಹೈಕೋರ್ಟ್ ಗೇಟ್ ನಂ.5 ರಬಳಿ ಸೋಮವಾರ ಬೆಳಿಗ್ಗೆ 9.30ರ ಸುಮಾರಿಗೆ ಕೆಲ ವಕೀಲರುಒಳ ಪ್ರವೇಶಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ತಡೆದ ಹಿನ್ನೆಲೆಯಲ್ಲಿ ಕೆಲಕಾಲ ಮಾತಿನ ಚಕಮಕಿ ನಡೆದಿದ್ದವು. 

ಘಟನೆ ಸಂಬಂಧ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ     ಓಕಾ ಅವರು, ಬೆಳಿಗ್ಗೆ 9.30ಕ್ಕೆ ನ್ಯಾಯಾಲಯದ ಆವರಣದಲ್ಲಿ ಅವರೇನು ಮಾಡಲು ಬಂದಿದ್ದರು ಎಂಬುದು ನನಗೆ ಅರ್ಥವಾಗುತ್ತಿಲ್ಲ. ವಕೀಲರು ಕಲಾಪಗಳ ನಿರ್ವಹಣೆಗೆ ರೂಪಿಸಲಾಗಿರುವ ಮಾರ್ಗಸೂಚಿಗಳ ಅನ್ವಯ ಕಾರ್ಯನಿರ್ವಹಿಸಬೇಕು. ಒಂದು ವೇಳೆ ನಿಯಮಗಳು ಪಾಲನೆ ಮಾಡದಿದ್ದರೆ, ನ್ಯಾಯಾಲಯವನ್ನು ಬಂದ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಸಂಕಷ್ಟರದಲ್ಲಿರುವ ಗುಮಾಸ್ತರ ಕುರಿತಂತೆ ಮಾತನಾಡಿರುವ ಅವರು, ಬೆಂಗಳೂರು ವಕೀಲರ ಸಂಘ ಹಾಗೂ ಕರ್ನಾಟಕ ಬಾರ್ ಕೌನ್ಸಿಲ್ ಏಕೆ ಇಂತಹವರಿಗೆ ಸಹಾಯ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಈ ಕುರಿತು 10 ಹಿರಿಯ ವಕೀಲರ ಸಮಿತಿ ರಚನೆಯಾಗಬೇಕಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿ ನಿಧಿ ಸಂಗ್ರಹಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com