10 ಲಕ್ಷ ಕೋವಿಡ್-19 ಪ್ರಕರಣಗಳು ಬಂದರೂ ಕರ್ನಾಟಕ ಸಿದ್ಧತೆ ಮಾಡಿಕೊಂಡಿದೆ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

ಕರ್ನಾಟಕದಲ್ಲಿ 10 ಲಕ್ಷ ಕೋವಿಡ್-19 ಪ್ರಕರಣಗಳು ವರದಿಯಾದರೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 
10 ಲಕ್ಷ ಕೋವಿಡ್-19 ಪ್ರಕರಣಗಳು ಬಂದರೂ ಕರ್ನಾಟಕ ಸಿದ್ಧತೆ ಮಾಡಿಕೊಂಡಿದೆ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್
10 ಲಕ್ಷ ಕೋವಿಡ್-19 ಪ್ರಕರಣಗಳು ಬಂದರೂ ಕರ್ನಾಟಕ ಸಿದ್ಧತೆ ಮಾಡಿಕೊಂಡಿದೆ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

ಉಡುಪಿ: ಕರ್ನಾಟಕದಲ್ಲಿ 10 ಲಕ್ಷ ಕೋವಿಡ್-19 ಪ್ರಕರಣಗಳು ವರದಿಯಾದರೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ರಾಜ್ಯದಲ್ಲಿ ಅಷ್ಟು ಪ್ರಮಾಣದ ಸಂಖ್ಯೆಗಳು ವರದಿಯಾಗುವ ಸಾಧ್ಯತೆಗಳಿಲ್ಲ. ಆದರೂ ಒಂದು ವೇಳೆ ಕೊರೋನ ಸಂಖ್ಯೆ ಹೆಚ್ಚಿದಲ್ಲಿ 10 ಲಕ್ಷ ಪ್ರಕರಣಗಳನ್ನು ನಿಭಾಯಿಸುವಷ್ಟು ಸಾಮರ್ಥ್ಯ ರಾಜ್ಯಕ್ಕೆ ಇದೆ ಎಂದು ಅವರು ತಿಳಿಸಿದ್ದಾರೆ. 

410 ಪ್ರಕರಣಗಳನ್ನು ಹೊಂದಿರುವ ಉಡುಪಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಸಚಿವರು, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಚನೆ ಮಾಡಲಾಗಿರುವ ಟಾಸ್ಕ್ ಫೋರ್ಸ್ ಗಳು ಕೋವಿಡ್-19 ಹರಡದಂತೆ ಎಚ್ಚರ ವಹಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ. 
 
ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com