ಶಾಲೆ ತೆರೆಯುವ ತರಾತುರಿ ನಿರ್ಧಾರದಿಂದ ಸಚಿವ ಸುರೇಶ್ ಕುಮಾರ್ ಯೂಟರ್ನ್

ಮಹಾಮಾರಿ ಕೊರೋನಾ ವೈರಸ್ ಕಾಟ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದರು ಜುಲೈ ತಿಂಗಳಿಂದ ಶಾಲೆಗಳನ್ನು ಪ್ರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ವ್ಯಕ್ತವಾಗುತ್ತಿರುವ ವಿರೋಧಕ್ಕೆ ಕೊನೆಗೂ ಸರ್ಕಾರ ಪ್ರತಿಕ್ರಿಯೆ ನೀಡಿದೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಕಾಟ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದರು ಜುಲೈ ತಿಂಗಳಿಂದ ಶಾಲೆಗಳನ್ನು ಪ್ರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ವ್ಯಕ್ತವಾಗುತ್ತಿರುವ ವಿರೋಧಕ್ಕೆ ಕೊನೆಗೂ ಸರ್ಕಾರ ಪ್ರತಿಕ್ರಿಯೆ ನೀಡಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಸರ್ಕಾರ ಯಾವುದೇ ನಿರ್ಧಾರವನ್ನೂ ತರಾತುರಿಯಲ್ಲಿ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ. 

ಸರ್ಕಾರ ಪರ್ಯಾಯ ಬೋಧನ ಕ್ರಮಗಳಿಗೆ ಸ್ಪಷ್ಟ ಕ್ರಿಯಾ ಯೋಜನೆಯನ್ನು ರೂಪಿಸುತ್ತಿದ್ದು, ಪ್ರತಿ ವಿದ್ಯಾರ್ಥಿಯ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸುವ ಸರ್ಕಾರದ ಅತಿ ದೊಡ್ಡ ಪ್ರಕ್ರಿಯೆಯ ಉದ್ದೇಶವನ್ನು ತಪ್ಪಾಗಿ ಅರ್ಥೈಸಿ ಖಾಸಗಿ ಲಾಬಿಗೆ ಮಣಿದ ಸರ್ಕಾರವೆಂದು ಬಿಂಬಿಸುತ್ತಿರುವುದು ದುರ್ದೈವ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com