ಬೇಡಿಕೆ ಪರಿಗಣಿಸಲು ಒಪ್ಪಿದ ಸಿಎಂ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಬೇಡಿಕೆಗಳನ್ನು ಪರಿಗಣಿಸುವುದಾಗಿ ಸಿಎಂ ಯಡಿಯೂರಪ್ಪ ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಗುರುವಾರ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಆಶಾ ಕಾರ್ಯಕರ್ತೆಯರು ವಾಪಸ್ ಪಡೆದಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಬೇಡಿಕೆಗಳನ್ನು ಪರಿಗಣಿಸುವುದಾಗಿ ಸಿಎಂ ಯಡಿಯೂರಪ್ಪ ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಗುರುವಾರ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಆಶಾ ಕಾರ್ಯಕರ್ತೆಯರು ವಾಪಸ್ ಪಡೆದಿದ್ದಾರೆ.

"ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ ಅವರು ಸಹ ಸಮ್ಮತಿಸಿದ್ದಾರೆ ಹೀಗಾಗಿ ಪ್ರತಿಭಟನೆ ಹಿಂದಕ್ಕೆ ಪಡೆಯುತ್ತಿರುವುದಾಗಿ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಸಿಬ್ಬಂದಿ ಸಂಘದ ಅಧ್ಯಕ್ಷ ವಿಶ್ವಾರಾಧ್ಯ ಹೇಳಿದ್ದಾರೆ.

ಮುಖ್ಯಮಂತ್ರಿಗಗಳ ಭರವಸೆ ಲಿಖಿತ ರೂಪದಲ್ಲಿ ಸಿಕ್ಕಿದೆ, ಉದ್ಯೋಗ ಖಾಯಂಗೊಳಿಸುವುದು, ವರ್ಗಾವಣೆ ಆಯ್ಕೆ, ಬೋನಸ್ ಅಪಘಾತ ವಿಮೆ, ರಜೆ ಮುಂತಾದ ಬೇಡಿಕೆಗಳಿಗೆ ಲಿಖಿತ ರೂಪದ ಭರವಸೆ ನೀಡಿದ್ದಾರೆ, ಹೀಗಾಗಿ ಪ್ರತಿಭಟನೆ ವಾಪಸ್ ಪಡೆದಿರುವುದಾಗಿ ಹೇಳಿದ್ದಾರೆ.

ಮೇ 20 ನಾವು ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರನ್ನು ಭೇಟಿ ಮಾಡಿದ್ದೆವು, ಆ ವೇಳೆ ನಮ್ಮ ಬೇಡಿಕೆಗಳನ್ನು ಪರಿಗಣಿಸಲು ಸಮಿತಿ ರಚಿಸುವುದಾಗಿ ಭರವಸೆ ನೀಡಿದ್ದರು.ಆದರೆ ಇದುವರೆಗೆ ಆ ಸಂಬಂಧ ಯಾವುದೇ ಕೆಲಸ ನಡೆದಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com