ಪಟ್ಟಾ ಜಮೀನಿನಲ್ಲಿ ಗಣಿಗಾರಿಕೆಗೆ ಪರವಾನಗಿ ಕಡ್ಡಾಯ: ಸರ್ಕಾರದ ತಿದ್ದುಪಡಿ ಎತ್ತಿಹಿಡಿದ ಹೈಕೋರ್ಟ್

ಪಟ್ಟಾ ಜಮೀನಿನಲ್ಲಿ ಗಣಿಗಾರಿಕೆ ನಡೆಸಲು ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಪಟ್ಟಾ ಜಮೀನಿನಲ್ಲಿ ಗಣಿಗಾರಿಕೆ ನಡೆಸಲು ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.

'ಕರ್ನಾಟಕ ಕಿರು ಗಣಿಗಾರಿಕೆ ರಿಯಾಯ್ತಿ ಕಾಯ್ದೆ'ಗೆ ನಿಯಮ 32ರ ಅಡಿ ತಿದ್ದುಪಡಿ ತಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಖಾಲಿದ್ ಪಾಷಾ ಸೇರಿ 250ಕ್ಕೂ ಜನರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು.

ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ.

ಜಮೀನಿನ ಒಡೆತನ ಹೊಂದಿರುವ ವ್ಯಕ್ತಿಗಳಿಗೆ ಅದರೊಳಗಿನ ಖನಿಜಗಳ ಮೇಲೂ ಹಕ್ಕಿದೆ. ಅದಕ್ಕಾಗಿ ಸರ್ಕಾರದಿಂದ ಪರವಾನಗಿ ಪಡೆಯಬೇಕಾಗಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. 

'ಕರ್ನಾಟಕ ಕಿರು ಗಣಿಗಾರಿಕೆ ರಿಯಾಯ್ತಿ ಕಾಯ್ದೆ'ಗೆ ನಿಯಮ 32ರ ನಿಯಮಕ್ಕೆ 2016ರ ಆಗಸ್ಟ್ 12ರಿಂದ ಅನ್ವಯವಾಗುವಂತೆ ತಿದ್ದುಪಡಿ ತಂದಿರುವ ಸರ್ಕಾರ, ಪಟ್ಟಾ ಜಮೀನಿನಲ್ಲಿ ಗಣಿಗಾರಿಕೆ ನಡೆಸಲು ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com