ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ: ಪರೀಕ್ಷಾ ಕೇಂದ್ರ ಬದಲಿಸಿದ 17,000 ವಿದ್ಯಾರ್ಥಿಗಳು

ಇದೇ ಜೂನ್ 18 ರಂದು ಬಾಕಿ ಇರುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಭೀತಿಯಿಂದಾಗಿ ಸುಮಾರು 17,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಿಸಿಕೊಂಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಇದೇ ಜೂನ್ 18 ರಂದು ಬಾಕಿ ಇರುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಭೀತಿಯಿಂದಾಗಿ ಸುಮಾರು 17,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಿಸಿಕೊಂಡಿದ್ದಾರೆ. 

ಈಗಾಗಲೇ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿಯೊಂದನ್ನು ಇಲಾಖೆ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು www,pue.kar.nic.in ವೆಬ್'ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳುವ ಅವಕಾಶವನ್ನು ಇಲಾಖೆ ಮಾಡಿಕೊಟ್ಟಿದೆ. ಹೆಚ್ಚಿನ ಮಾಹಿತಿ ಪಡೆಯಲು ವಿದ್ಯಾರ್ಥಿಗಲು ಪರೀಕ್ಷಾ ಕೇಂದ್ರ 080-23083900 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. 

ಪ್ರಸ್ತುತ ಬಿಡುಗಡೆ ಮಾಡಿರುವ ಪಟ್ಟಿ ತಾತ್ಕಾಲಿಕ ಪಟ್ಟಿಯಾಗಿದ್ದು, ಜೂನ್ 7ರಂದು ಅಂತಿಮ ಮಟ್ಟಿ ಪ್ರಕಟಿಸಲಾಗುವುದು. ಸಂಬಂಧ ಪಟ್ಟ ಕಾಲೇಜುಗಳ ಪ್ರಾಚಾರ್ಯರ ಮೂಲಕ ತಿದ್ದುಪಡಿಗೆ ಜೂನ್ 5ರವರೆಗೆ ಅವಕಾಶ ಕಲ್ಪಿಸಲಾಗಿದೆ. 

ವಿದ್ಯಾರ್ಥಿಗಳು ತಾವು ವಾಸಿಸುತ್ತಿರುವ ಊರುಗಳಲ್ಲಿ ಹಾಗೂ ಬೇರೆ ಬೇರೆ ಊರುಗಳಲ್ಲಿ ಕಲಿಯುತ್ತಿರುವ ಮಕ್ಕಳು ಲಾಕ್"ಡೌನ್ ಹಿನ್ನೆಲೆಯಲ್ಲಿ ತಮ್ಮೂರಿಗೆ ವಾಪಸ್ಸಾಗಲು ಸಾಧ್ಯವಾಗುತ್ತಿಲ್ಲ. ಅಂತಹವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಅವರಿರುವ ಸ್ಥಳದ ಸಮೀಪದ ಜಿಲ್ಲೆಯ ಅಥವಾ ತಾಲೂಕಿನಲ್ಲಿ ಅವರು ಬಯಸುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. 

ಸೋಮವಾರದವರೆಗೂ 16,229 ಮಂದಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸಲುವಾಗಿ ಅವರಿರುವ ಜಿಲ್ಲೆಗಳು ಹಾಗೂ ಸ್ಥಳಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಿಸಿಕೊಳ್ಳಲು ಜೂನ್ 5ರವರೆಗೂ ಕಾಲಾವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಗಡಿ ಜಿಲ್ಲೆಗಳಲ್ಲಿರುವ ವಿದ್ಯಾರ್ಥಿಗಲಿಗೆ ಅವರಿರುವ ಜಿಲ್ಲೆಗಳ ಹತ್ತಿರದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಈಗಾಗಲೇ ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ಸಾರಿಗೆ ಸೇರಿದಂತೆ ಇನ್ನಿತರೆ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com