ವಿದ್ಯಾರ್ಥಿಗಳು ಇಚ್ಛಿಸಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ: ಸಚಿವ ಸುರೇಶ್ ಕುಮಾರ್

12,647 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಅವರು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

ಬೆಂಗಳೂರು: 12,647 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಅವರು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಎಸ್ಎಸ್ಎಲ್'ಸಿ ಪೂರ್ವ ಸಿದ್ದತೆ ಕುರಿತು ವಿಕಾಸಸೌಧದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಎಸ್'ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಎಸ್ಎಸ್ಎಲ್'ಸಿ ಪರೀಕ್ಷೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಬೇಕು. ಪರೀಕ್ಷೆಗೂ ಮುನ್ನ ಕೊನೇ ಗಳಿಗೆಯಲ್ಲಿ ಕಂಟೈನ್ಮೆಂಟ್ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚಿಸಿದ್ದಾರೆ. 

ಎಸ್ಎಸ್ಎಲ್'ಸಿ ಉತ್ತರಪತ್ರಿಕೆಗಳ ಸಂಗ್ರಹಣಾ ಕೇಂದ್ರಗಳಿಗೆ ಚುನಾವಣಾ ಸ್ಟ್ರಾಂಗ್ ರೂಮ್'ಗಳಷ್ಟೇ ಭದ್ರತೆ ಕಲ್ಪಿಸಬೇಕು. ಎಸ್ಎಸ್ಎಲ್'ಸಿ ಪರೀಕ್ಷೆ ಸುರಕ್ಷಿತವಾಗಿ ನಡೆಸುವಂತೆ ತಿಳಿಸಿದ್ದಾರೆ. 

ಜಿಲ್ಲಾಡಳಿತಗಳು ಎಸ್ಎಸ್ಎಲ್'ಸಿ ಪರೀಕ್ಷೆ ಜಿಲ್ಲಾಡಳಿತಗಳು ಎಸ್ಎಸ್ಎಲ್'ಸಿ ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೂಡಲೇ ಸಹಾಯವಾಣಿ ಪ್ರಾರಂಭಿಸಿ ಈ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಮಳೆಗಾಲವಾಗಿರುವ ಕಾರಣ ಪರೀಕ್ಷಾಕೇಂದ್ರಗಳನ್ನು ಪರಿಶೀಲಿಸಿ ದುರಸ್ತಿ ಕಾರ್ಯಕೈಗೊಂಡು ವಿದ್ಯುತ್ ಸೌಲಭ್ಯ ಕಲ್ಪಿಸಬೇಕು. ಗಡಿಯಾಚೆಯಿಂದ ಬರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆ ಮಾಡುವುದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಬೇಕು. ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡ ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಡುವಂತೆ ಸೂಚಿಸಿದ್ದಾರೆ. 

ಎಸ್ಎಸ್ಎಲ್'ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ
ಜೂನ್.25ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಿದೆ. ಬಸ್ ಹತ್ತುವ ವಿದ್ಯಾರ್ಥಿಗಳು ಶಾಲೆಯ ಐಡಿ ಕಾರ್ಡ್ ಹಾಗೂ ಪರೀಕ್ಷಾ ಪ್ರವೇಶ ಪತ್ರವನ್ನು ತೊರಿಸಬೇಕೆಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com