ರೋಗಲಕ್ಷಣವಿಲ್ಲದಿದ್ದರೂ ಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ

ರೋಗಲಕ್ಷಣವಿಲ್ಲದಿದ್ದರೂ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ಎಂದು ರಾಜ್ಯ ಸರ್ಕಾರ ಗುರುವಾರ ತಿಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರೋಗಲಕ್ಷಣವಿಲ್ಲದಿದ್ದರೂ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ಎಂದು ರಾಜ್ಯ ಸರ್ಕಾರ ಗುರುವಾರ ತಿಳಿಸಿದೆ. 

ರಾಜ್ಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಂದ ವಾಪಸ್ಸಾಗುವ ರೋಗ ಲಕ್ಷಣಗಳಿರುವ ವ್ಯಕ್ತಿಗಳಿಗೆ 7 ದಿನಗಳ ಆಸ್ಪತ್ರೆ ಐಸೋಲೇಷನ್ ಹಾಗೂ 14 ದಿನಗಳ ಹೋಂ ಕ್ವಾರಂಟೈನ್ ವಿಧಿಸಲು ಆದೇಶಿಸಿದೆ. ಇದರೊಂದಿಗೆ ಕ್ವಾರಂಟೈನ್ ಒಟ್ಟು ಅವಧಿ 21 ದಿನಗಳಿಗೆ ಏರಿದಂತಾಗಿದೆ. ಅಲ್ಲದೆ, ಮಹಾರಾಷ್ಟ್ರದಿಂದ ಬರುವ ಎಲ್ಲರಿಗೂ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಜೊತೆಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ವಿಧಿಸಲಾಗುವುದು ಎಂದು ಹೇಳಿದೆ. 

ಮೇ.31ರಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದ ಮಾರ್ಗಸೂಚಿಯಲ್ಲಿ ಮಹಾರಾಷ್ಟ್ರದಿಂದ ಆಗಮಿಸುವವರಿಗೆ ಮಾತ್ರ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನಗಳ ಹೋಂ ಕ್ವಾರಂಟೈನ್'ಗೆ ಒಳಪಡಿಸಲಾಗುವುದು. ಮಹಾರಾಷ್ಟ್ರ ಹೊರತುಪಡಿಸಿ ಇತರೆ ರಾಜ್ಯದಿಂದ ಬರುವ ರೋಗ ಲಕ್ಷಣಗಳಿಲ್ಲದವರಿಗೆ 14 ದಿನಗಳ ಹೋಂ ಕ್ವಾರಂಟೈನ್ ವಿಧಿಸಲಾಗುವುದು. 

ರೋಗ ಲಕ್ಷಣಗಳಿದ್ದರೆ 7 ದಿನಗಳ ಕಾಲ ಕೊರೋನಾ ಆರೈಕೆ ಕೇಂದ್ರದಲ್ಲಿ ಐಸೋಲೇಷನ್ ಮಾಡಿ ಬಳಿಕ 7 ದಿನಗಳ ಕಾಲ ಹೋಂ ಕ್ವಾರಂಟೈನ್'ಗೆ ಒಳಪಡಿಸುವುದಾಗಿ ಹೇಳಿತ್ತು. ಇದೀಗ ಪರಿಷ್ಕೃತ ಆದೇಶ ಹೊರಡಿಸಿರುವ ಸರ್ಕಾರ ಹೊರ ರಾಜ್ಯದಿಂದ ಬರುವ ರೋಗ ಲಕ್ಷಣಗಳಿರುವವರಿಗೆ 7 ದಿನಗಳ ಆಸ್ಪತ್ರೆ ಐಸೊಲೇಷನ್ ಹಾಗೂ 14 ದಿನಗಳ ಹೋಂ ಕ್ವಾರಂಟೈನ್ ವಿಧಿಸಲಾಗುವುದು, ಮಹಾರಾಷ್ಟ್ರದಿಂದ ಆಗಮಿಸಿದ ಎಲ್ಲರಿಗೂ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ 14 ದಿನಗಳ ಹೋಂ ಕ್ವಾರಂಟೈನ್ ವಿಧಿಸಲಾಗುವುದು ಎಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com