ಪರಿಸರ ಸಂರಕ್ಷಣೆ: ಮಾಲಿನ್ಯ ನಿಯಂತ್ರಣ ಮಂಡಳಿ ಡಿಜಿಟಲ್ ಅಭಿಯಾನಕ್ಕೆ ಮುಖ್ಯಮಂತ್ರಿ ಮೆಚ್ಚುಗೆ

ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವುದು ಮಹತ್ವದ ಬೆಳವಣಿಗೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೆಚ್ಚುಗೆ ಸೂಚಿಸಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವುದು ಮಹತ್ವದ ಬೆಳವಣಿಗೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೆಚ್ಚುಗೆ ಸೂಚಿಸಿದ್ದಾರೆ.

ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿ ಪರಿಸರ ದಿನಾಚರಣೆಯ ವಿಷಯ “ಜೀವ ವೈವಿಧ್ಯ”. ಜೀವ ವೈವಿಧ್ಯ ಇದ್ದಾಗ ಮಾತ್ರ ಪರಿಸರ ಸಮತೋಲನ ಕಾಪಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಕೋವಿಡ್ 19ರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಿಂದಾಗಿ ಪರಿಸರ ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿರುವುದು ಸಮಾಧಾನಕರ ವಿಷಯ. ಮಾಲೀನ್ಯ ಪ್ರಮಾಣ ತಗ್ಗಿಸಲು ಎಲ್ಲರೂ ಕೈ ಜೋಡಿಸಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com