ಮಹಾರಾಷ್ಟ್ರದಿಂದ ಮರಳಿದ ವಲಸೆ ಕಾರ್ಮಿಕರಿಗೆ ಮನ್ರೇಗಾ ಅಡಿ ಉದ್ಯೋಗ: ಈಶ್ವರಪ್ಪ

ಮಹಾರಾಷ್ಟ್ರದಿಂದ ಬಂದಿರುವ ವಲಸೆ ಕಾರ್ಮಿಕರಿಗೆ ನರೇಗಾ ಅಡಿ ಕೆಲಸ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರಪ್ಪ ಹೇಳಿದ್ದಾರೆ.

Published: 05th June 2020 01:39 PM  |   Last Updated: 05th June 2020 01:39 PM   |  A+A-


K S Eshwarappa

ಕೆಎಸ್ ಈಶ್ವರಪ್ಪ

Posted By : Shilpa D
Source : The New Indian Express

ಕಲಬುರಗಿ: ಮಹಾರಾಷ್ಟ್ರದಿಂದ ಬಂದಿರುವ ವಲಸೆ ಕಾರ್ಮಿಕರಿಗೆ ನರೇಗಾ ಅಡಿ ಕೆಲಸ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗೆ ₹ 20 ಲಕ್ಷ ‌ಕೋಟಿ ಪ್ಯಾಕೇಜ್ ನಲ್ಲಿ ₹ 40 ಸಾವಿರ ಕೋಟಿ ಹಂಚಿಕೆ ಮಾಡಿದೆ. ಹೀಗಾಗಿ ಒಬ್ಬರಿಗೆ ಕೂಲಿ ದಿನವನ್ನು ಗರಿಷ್ಠ 150 ದಿನಗಳಿಗೆ ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಲಾಕ್‌ಡೌನ್‌ನಿಂದಾಗಿ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದವರು ಇದೀಗ ಗ್ರಾಮಗಳಿಗೆ ವಾಪಸಾಗಿದ್ದಾರೆ. ಉದ್ಯೋಗ ಕೇಳಿದ ಎಲ್ಲರಿಗೂ ಜಾಬ್‌ ಕಾರ್ಡ್ ನೀಡುವಂತೆ ಎಲ್ಲ ಜಿಲ್ಲಾ ಪಂಚಾಯಿತಿ ‌ಸಿಇಒಗಳಿಗೆ ಸೂಚನೆ ನೀಡಿದ್ದೇನೆ. ಕೇಂದ್ರ ಸರ್ಕಾರ ನಿರ್ದೇಶನ ನೀಡಿದರೆ ಈಗ ಇರುವ ₹ 275 ಕೂಲಿ ದರವನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ಭರವಸೆ ‌ನೀಡಿದರು. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರು ಬೇಕಾದರೂ ಉದ್ಯೋಗ ‌ಖಾತ್ರಿಯಡಿ ಜಾಬ್ ಕಾರ್ಡ್ ಪಡೆಯಬಹುದು ಎಂದು ಈಶ್ವರಪ್ಪ ‌ಹೇಳಿದ್ದಾರೆ.

ಪಕ್ಷದಲ್ಲಿ ಸ್ಥಾನಮಾನ ನೀಡುವುದಕ್ಕೆ ಸಂಬಂಧಿಸಿದಂತೆ ಅಸಮಾಧಾನ ಇರುವುದು ನಿಜ. ಆದರೆ ಸೂಕ್ತ ವೇದಿಕೆಯಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದರು. ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕೇ ಎಂಬುದರ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸಲಹೆ ಪಡೆದೆವು. ಸದ್ಯಕ್ಕೆ ‌ಕೊರೊನಾ ಇರುವುದರಿಂದ ಚುನಾವಣೆ ನಡೆಸುವುದು ಬೇಡ ಎಂದರು.
ಹೀಗಾಗಿ ಸದ್ಯಕ್ಕೆ ‌ಚುನಾವಣೆ ಮುಂದೂಡಲಾಗಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.


 

Stay up to date on all the latest ರಾಜ್ಯ news
Poll
Marraige

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ರಿಂದ ಹೆಚ್ಚಿಸಬೇಕೆ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp