ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯ: ಕೇಂದ್ರಕ್ಕೆ ಹೈಕೋರ್ಟ್ ನೊಟೀಸ್

ಕೋವಿಡ್‌-19 ಹಿನ್ನೆಲೆಯಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ 'ಆರೋಗ್ಯ ಸೇತು' ಮೊಬೈಲ್‌ ಆ್ಯಪ್‌ ಬಳಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ಸಂಬಂಧ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕೋವಿಡ್‌-19 ಹಿನ್ನೆಲೆಯಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ 'ಆರೋಗ್ಯ ಸೇತು' ಮೊಬೈಲ್‌ ಆ್ಯಪ್‌ ಬಳಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ಸಂಬಂಧ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ಡಿಜಿಟಲ್‌ ವಲಯದಲ್ಲಿನಾಗರಿಕರ ಹಕ್ಕುಗಳ ರಕ್ಷಣೆಗೆ ಹೋರಾಟ ಮಾಡುತ್ತಿರುವ ಬೆಂಗಳೂರಿನ ಅನಿವರ್ ಎ. ಅರವಿಂದ್‌ ಸಲ್ಲಿಸಿರುವ ಪಿಐಎಲ್‌ ಸಿಜೆ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.

ಕೋವಿಡ್‌-19 ಹಿನ್ನೆಲೆಯಲ್ಲಿ ರೈಲು ಪ್ರಯಾಣಿಕರಿಗೆ 'ಆರೋಗ್ಯ ಸೇತು' ಮೊಬೈಲ್‌ ಆ್ಯಪ್‌ ಕಡ್ಡಾಯಗೊಳಿಸಲಾಗಿದೆ. ಜೂನ್ 1 ರಿಂದ ರೈಲಿನಲ್ಲಿ ಪ್ರಯಾಣಿಸುವವರು ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಕಡ್ಡಾಯವಾಗಿ ಮಾಡಿಕೊಳ್ಳಬೇಕೆಂದು ಆದೇಶ ಹೊರಡಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com