ಮಂಗಳೂರು: ಉದ್ಯಮಿ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ

ಉದ್ಯಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸರು ನಾಲ್ವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಗಳಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಉದ್ಯಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸರು ನಾಲ್ವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಗಳಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕಾರ್ನಾಡ್ ಬಪ್ಪನಾಡಿನ ಮುಹಮ್ಮದ್ ಹಾಸಿಮ್ (27), ಮುಹಮ್ಮದ್ ರಾಝಿಂ(24) ಮತ್ತು ನಿಸಾರ್ ಯಾನೆ ರಿಯಾಜ್(33), ಉಚ್ಚಿಲ ಬಡಾ ಗ್ರಾಮದ ಅಬೂಬಕ್ಕರ್ ಸಿದ್ದೀಕ್ (27) ಎಂದು ಗುರುತಿಸಲಾಗಿದೆ. 

ಮೂಲ್ಕಿ ಜಂಕ್ಷನ್ ಸಮೀಪದ ಎಚ್‌ಡಿಎಫ್‌ಸಿ ಬ್ಯಾಂಕ್ ಮುಂಭಾಗ ಮೂಡಬಿದ್ರೆಯ ಜ್ಯುವೆಲ್ಲರಿ ಮಾಲೀಕನ ಅಬ್ದುಲ್ ಲತೀಫ್(36) ಅವರನ್ನು ದುಷ್ಕರ್ಮಿಗಳ ತಂಡ ನಿನ್ನೆ ಸಂಜೆ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು.

ಹಳೆ ದ್ವೇಷದಿಂದ ಈ ಹತ್ಯೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ಮನಗಂಡಿದ್ದ ಮೂಲ್ಕಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕಾರ್ನಾಡ್ ದರ್ಗಾ ರೋಡ್ ನಿವಾಸಿ ಕಾಂಗ್ರೆಸ್ ಮುಖಂಡ ಮುನೀರ್, ಅವರು ಪುತ್ರ ಇಯಾಝ್ ಮತ್ತು ಅಳಿಯ ಅಬ್ದುಲ್ ಲತೀಫ್ ಅವರು ನಿನ್ನೆ ಸಂಜೆ ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ಬಂದಾಗ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದರು. ಮುನೀರ್ ಮೇಲೆ ಹಲ್ಲೆ ನಡೆಯುವುದನ್ನು ಕಂಡ ಲತೀಫ್ ಅಡ್ಡಬಂದಿದ್ದು ಆತನನ್ನು ಹಿಗ್ಗಾಮುಗ್ಗಾ ಕೊಚ್ಚಿದ ಬಳಿಕ ಇಯಾಝ್ ಮೇಲೂ ದಾಳಿ ನಡೆಸಿ ಪರಾರಿಯಾಗಿದ್ದರು. 
ಲತೀಫ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿದ್ದಾರೆ. ಮುನೀರ್ ಮೇಲೆ ಪೂರ್ವದ್ವೇಷದಿಂದ ತಂಡ ದಾಳಿ ನಡೆಸಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ.

ಹಲ್ಲೆಯಿಂದ ಗಾಯಗೊಂಡ ಮುನೀರ್, ಇಯಾಝ್, ಇಮ್ರಾನ್ ಅವರನ್ನು ಖಾಸಗಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಗಂಭೀರ ಗಾಯಗೊಂಡಿದ್ದ ಅಬ್ದುಲ್ಲತೀಫ್ ದಾರಿಮಧ್ಯೆ ಮೃತಪಟ್ಟಿದ್ದರು. 

ಘಟನೆಗೆ ಸಂಬಂಧಿಸಿದಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ ಪ್ರಕರಣದ ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com