ಸೋಂಕಿತರ ಕುರಿತು ಸರ್ಕಾರಕ್ಕೆ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳು: ಉತ್ತರ ಕರ್ನಾಟಕದಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

ಕಳೆದ 10 ದಿನಗಳಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ 13 ಮಂದಿ ಮಹಾಮಾರಿ ಕೊರೋನಾ ವೈರಸ್'ಗೆ ಬಲಿಯಾಗಿದ್ದು, ಖಾಸಗಿ ಆಸ್ಪತ್ರೆಗಳು ಸರ್ಕಾರಕ್ಕೆ ಮಾಹಿತಿ ನೀಡಿತ ಕಾರಣ ಸೋಂಕಿತರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿ ಮೃತರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಳೆದ 10 ದಿನಗಳಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ 13 ಮಂದಿ ಮಹಾಮಾರಿ ಕೊರೋನಾ ವೈರಸ್'ಗೆ ಬಲಿಯಾಗಿದ್ದು, ಖಾಸಗಿ ಆಸ್ಪತ್ರೆಗಳು ಸರ್ಕಾರಕ್ಕೆ ಮಾಹಿತಿ ನೀಡಿತ ಕಾರಣ ಸೋಂಕಿತರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿ ಮೃತರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. 

ಸೋಂಕಿರ ವ್ಯಕ್ತಿಗಳು ಆರಂಭದಲ್ಲಿ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಈ ಬಗ್ಗೆ ಖಾಸಗಿ ಆಸ್ಪತ್ರೆಗಳು ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿಲ್ಲ. ಅಂತಿಮವಾಗಿ ಸೋಂಕಿತರು ಸರ್ಕಾರಿ ಆಸ್ಪತ್ರೆಗೆ ಬರುವಷ್ಟರಲ್ಲಿ ಸೋಂಕು ಉಲ್ಬಣಗೊಂಡು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. 

ಈ ಕುರಿತು ಕ್ರಿಟಿಕಲ್ ಕೇರ್ ಸಪೋರ್ಟ್ ಟೀಮ್ (ಸಿಸಿಎಸ್'ಟಿ) ವಿಶೇಷ ಅಧಿಕಾರಿ ಈ ಬಗ್ಗೆ ಮಾತನಾಡಿ, ಗದಗ ಜಿಲ್ಲೆಯಲ್ಲಿ 44 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ವ್ಯಕ್ತಿ ಈ ಹಿಂದೆ ಎರಡು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ಆದರೆ, ವ್ಯಕ್ತಿಯಲ್ಲಿ ಕೊರೋನಾ ಲಕ್ಷಣಗಳಿದ್ದರೂ ಖಾಸಗಿ ಆಸ್ಪತ್ರೆಗಳು ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿಲ್ಲ. ಪರಿಸ್ಥಿತಿ ಗಂಭೀರವಾದಾಗ ವ್ಯಕ್ತಿ ಹುಬ್ಬಳ್ಳಿ-ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ವ್ಯಕ್ತಿಗೆ ಐಎಲ್ಐ, ಜ್ವರ, ಕೆಮ್ಮು, ಯುಟಿಐ ಹಾಗೂ ಮಧುಮೇಹಕ್ಕೆ ಚಿಕಿತ್ಸೆ ನೀಡಲಾಗಿದೆ. ಜೂನ್ 4 ರಂದು ವ್ಯಕ್ತಿ ಸರ್ಕಾರಿ ಆಸ್ಪತ್ರೆಗೆ ದಾಖಲಾದ ದಿನವೇ ಮೃತಪಟ್ಟಿದ್ದಾರೆ. ಹೀಗಾಗಿ ಸಾರಿ ಹಾಗೂ ಐಎಲ್ಐ ಲಕ್ಷಣಗಳಿರುವ ವ್ಯಕ್ತಿಗಳು ಕಂಡು ಬಂದ ಕೂಡಲೇ ಮಾಹಿತಿ ನೀಡುವಂತೆ ಈಗಾಗಲೇ ಎಲ್ಲಾ ಖಾಸಗಿ ಆಸ್ಪತ್ರೆಗಳು ಹಾಗೂ ಔಷಧಾಲಯಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ವಿಜಯಪುರದಲ್ಲೂ ಕೂಡ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳೀಯವಾಗಿ ಸಿಗುವ ಔಷಧ ಕತೆಗೆದುಕೊಂಡಿದ್ದ ವ್ಯಕ್ತಿ, ಪರಿಸ್ಥಿತಿ ಚಿಂತಾಜನಕವಾದ ಬಳಿಕ ಆಸ್ಪತ್ರೆಗೆ ದಾಖಲಾಗಿತ್ತು. ಬಳಿಕ ಆ ವ್ಯಕ್ತಿ ಮೃತಪಟ್ಟಿದ್ದರು. 

ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದಾಗ ಆ ವ್ಯಕ್ತಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಸಾಕಷ್ಟು ಪ್ರಕರಣಗಳಲ್ಲಿ ಈ ರೀತಿಯಾಗುತ್ತದೆ. ಇಂತಹ ಪ್ರಕರಣಗಳು ಬೆಳಕಿಗೆ ಬಂದಾಗ ಸಂಬಂಧಪಟ್ಟಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಇಕಾರಿಗಳು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com