ರಾಜ್ಯಸಭೆ ಚುನಾವಣೆ: ಹೈಕಮಾಂಡ್ ಗೆ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರವಾನೆ

ಮಾರಕ ಕೊರೋನಾ ವೈರಸ್ ಆರ್ಭಟದ ನಡುವೆಯೇ ಜೂನ್‌ 19 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿದ್ದು, ಮೂವರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಹೈ ಕಮಾಂಡ್ ಗೆ ರವಾನೆ ಮಾಡಲಾಗಿದೆ. 
ಬಿಜೆಪಿ
ಬಿಜೆಪಿ

ಬೆಂಗಳೂರು: ಮಾರಕ ಕೊರೋನಾ ವೈರಸ್ ಆರ್ಭಟದ ನಡುವೆಯೇ ಜೂನ್‌ 19 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿದ್ದು, ಮೂವರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಹೈ ಕಮಾಂಡ್ ಗೆ ರವಾನೆ ಮಾಡಲಾಗಿದೆ. 

ಬಿಜೆಪಿ ಶಿಫಾರಸ್ಸು ಮಾಡಿರುವ ಮೂರು ಅಭ್ಯರ್ಥಿಗಳ ಪೈಕಿ ಇಬ್ಬರನ್ನು ಆಯ್ಕೆಯನ್ನು ಫೈನಲ್ ಮಾಡುವ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ಶಿಫಾರಸು ಮಾಡಲು ರಾಜ್ಯ ಬಿಜೆಪಿ ನಾಯಕರು ತೀರ್ಮಾನ ಮಾಡಿದ್ದಾರೆ. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬೆಳಗಾವಿ ಭಾಗದ ಪ್ರಭಾವಿ ನಾಯಕ ಪ್ರಭಾಕರ್ ಕೋರೆ, ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ಹಾಗೂ ಮಂಗಳೂರು ಭಾಗದ ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ಹೆಸರು ಫೈನಲ್ ಮಾಡಲಾಗಿದ್ದು, ಈ ಮೂವರಲ್ಲಿ ಇಬ್ಬರ ಹೆಸರನ್ನು ಪ್ರಕಟಿಸುವಂತೆ ಕೇಂದ್ರ ಚುನಾವಣಾ ಸಮಿತಿಗೆ ಸಭೆ ಮನವಿ ಮಾಡಿದೆ.

ಮೂರನೇ ಅಭ್ಯರ್ಥಿ ಇಲ್ಲ, ಬೇರೆಯವರಿಗೆ ಮತ ಹಾಕಲ್ಲ
ಇನ್ನು ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿ ಗಳನ್ನು ಮಾತ್ರ ಕಣಕ್ಕಿಳಿಸಲು ಸಭೆ ತೀರ್ಮಾನ ಮಾಡಿದ್ದು, ಮೂರನೇ ಅಭ್ಯರ್ಥಿಯನ್ನು ಹಾಕುವ ಕುರಿತು ಯಾವುದೇ ನಿರ್ಣಯ ಮಾಡಿಲ್ಲ. ಮೂರನೇ ಅಭ್ಯರ್ಥಿಗೆ ಆಗುವಷ್ಟು ಮತಗಳು ಇಲ್ಲದೆ ಇರುವುದರಿಂದ ಎರಡೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಭೆ ತೀರ್ಮಾನ ಮಾಡಿದೆ. ಇನ್ನು ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಅರವಿಂದ್ ಲಿಂಬಾವಳಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡಗೆ ಬೆಂಬಲ ನೀಡುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಆದರೆ ಎರಡು ಅಭ್ಯರ್ಥಿಗೆ ಹಾಕಿ ಉಳಿದ ಮತಗಳನ್ನು ಅದೇ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ ಹಾಕಿಸುತ್ತೇವೆ ಹೊರತು ಬೇರೆ ಯಾರಿಗೂ ಬೆಂಬಲ ಕೊಡುವ ಬಗ್ಗೆ ಯಾವುದೇ ನಿರ್ಣಯ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com