ಎಂಪಿಎಂ ಕಾರ್ಖಾನೆ ಪುನಶ್ಚೇತನಗೊಳಿಸಲು ಸಿಎಂ ಮಹತ್ವದ ನಿರ್ಧಾರ: ರೂಪುರೇಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ

ಮೈಸೂರಿನ ಪ್ರತಿಷ್ಟಿತ ಕಾರ್ಖಾನೆಗಳಲ್ಲೊಂದಾದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಈ ಸಂಬಂಧ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮೈಸೂರಿನ ಪ್ರತಿಷ್ಟಿತ ಕಾರ್ಖಾನೆಗಳಲ್ಲೊಂದಾದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಈ ಸಂಬಂಧ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಗೃಹ ಕಚೇರಿ ಕೃಷ್ಣಾದಲ್ಲಿ ಕೈಗಾರಿಕೆ, ಅರಣ್ಯ ಮತ್ತು ಇತರೆ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಖಾನೆಯ ಉದ್ಯೋಗ ನಂಬಿಕೊಂಡು ಹಲವಾರು ಕುಟುಂಬಗಳು ಜೀವನ ನಡೆಸುತ್ತಿದ್ದವು. ಆದರೀಗ ಕಾರ್ಖಾನೆ ಬಂದ್ ಆದ ಹಿನ್ನೆಲೆಯಲ್ಲಿ ಆ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಎಂಪಿಎಂಗೆ ನೀಡಲಾದ ಅರಣ್ಯ ಭೂಮಿಯಲ್ಲಿ ಕಾಗದ ತಯಾರಿಕೆಗೆ ಬೇಕಾದ ಕಚ್ಚಾ ಸಾಮಾಗ್ರಿ ಭರಪೂರ ಇರುವುದರಿಂದ ಅದನ್ನು ಬಳಸಿಕೊಂಡು ಕಾರ್ಖಾನೆ ಮುನ್ನಡೆಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅರಣ್ಯ ಭೂಮಿ ಗುತ್ತಿಗೆ ಪೂರ್ಣಗೊಳ್ಳುವ ಹಂತದಲ್ಲಿರುವುದರಿಂದ ಮುಂದೇನು ಮಾಡಬಹುದು? ಎಂಪಿಎ ಅರಣ್ಯ ವಿಭಾಗದಲ್ಲಿ ಕೆಲಸ ಮಾಡುವ ವಾಚರ್ಸ್ ಗಳ ಭವಿಶ್ಯದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಈ ಹಿಂದೆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಲು ಹಲವು ಪ್ರಯತ್ನಗಳು ನಡೆದಿದ್ದವು. ಆದರೆ, ಇದಕ್ಕೆ ನೌಕರರು ಹಾಗೂ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ನಂತರ ಭಾರೀ ನಷ್ಟದಿಂದಾಗಿ 2015ರಲ್ಲಿ ಕಾರ್ಖಾನೆ ಸ್ಥಗಿತಗೊಂಡಿತ್ತು. ನಷ್ಟ ಎದುರಾಗುತ್ತಿದ್ದಂತೆಯೇ ಕೆಲ ನೌಕರರು ಸ್ವಯಂಪ್ರೇರಿತರಾಗಿ ನಿವೃತ್ತಿ ಪಡೆದುಕೊಂಡಿದ್ದರು. ಇನ್ನುಳಿದ ನೌಕರರನ್ನು ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com