17 ಬೆಳೆಗಳ ಬೆಂಬಲ ಬೆಲೆ ಏರಿಸಿ: ಪ್ರಧಾನಿ ಮೋದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಅನುಮೋದಿಸಿರುವ ರೈತರ 17 ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್'ಪಿ) ವಾಸ್ತವಕ್ಕೆ ಹತ್ತಿರವಾಗಿಲ್ಲ. ಹೀಗಾಗಿ ಕೃಷಿ ವೆಚ್ಚ ಮತ್ತು ಬೆಲೆ ಆಯೋಗ ಪರಿಷ್ಕೃತ ಮಾನದಂಡದೊಂದಿಗೆ ನಿಗದಿ ಮಾಡಬೇಕು ಎಂದು ವಿಧಾನಸಬೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ...

Published: 08th June 2020 09:03 AM  |   Last Updated: 08th June 2020 09:03 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಅನುಮೋದಿಸಿರುವ ರೈತರ 17 ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್'ಪಿ) ವಾಸ್ತವಕ್ಕೆ ಹತ್ತಿರವಾಗಿಲ್ಲ. ಹೀಗಾಗಿ ಕೃಷಿ ವೆಚ್ಚ ಮತ್ತು ಬೆಲೆ ಆಯೋಗ ಪರಿಷ್ಕೃತ ಮಾನದಂಡದೊಂದಿಗೆ ನಿಗದಿ ಮಾಡಬೇಕು ಎಂದು ವಿಧಾನಸಬೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಒತ್ತಾಯಿಸಿದ್ದಾರೆ. 

ಈ ಕುರಿತು ಪ್ರಧಾನಿಗೆ ಬರೆದ ಪತ್ರದಲ್ಲಿ 2022-23ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದೀರಿ. ಆದರೆ, ನೀವು ಕೃಷಿ ಚಟುವಟಿಕೆ ಹಾಗೂ ರೈತರಿಗೆ ಬೆಂಬಲ ಬೆಲೆ ನಿಗದಿ ಮಾಡುವ ಕುರಿತು ತೆಗೆದುಕೊಳ್ಳುವ ತೀರ್ಮಾನಗಳು ಅದಕ್ಕೆ ಪೂರಕವಾಗಿಲ್ಲ. ಬದಲಿಕೆ ರೈತರನ್ನು ಮತ್ತಷ್ಟು ಕಷ್ಟಗಳಿಗೆ ತಳ್ಳುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 2018-19ನೇ ಬಜೆಟ್ ನಲ್ಲಿ ರೈತರಿಗೆ ಬೆಳೆ ಬೆಳೆಯಲು ತಗುಲುವ ವೆಚ್ಚ 1.5 ರಷ್ಟು ಪಟ್ಟು ಕನಿಷ್ಠ ಬೆಂಬಲ ಬೆಲೆ ನೀಡುವುದಾಗಿ ಹೇಳಿದ್ದಿರಿ. 

ಕಷಿ ವೆಚ್ಚ ಮತ್ತು ಬೆಲೆ ಆಯೋಗ (ಸಿಎಪಿಸಿ) ಇದಕ್ಕೆ ತಕ್ಕನಾದ ಮಾನದಂಡ ಅನುಸರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿಲ್ಲ. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ವೇಲೆ ಸಿ-2 ಮಾನದಂಡದ ಪ್ರಕಾರ ಕೇವಲ ಕೃಷಿ ವೆಚ್ಚ ಮಾತ್ರವಲ್ಲದೆ ಹೊಲದಲ್ಲಿ ದುಡಿಯುವ ಕುಟುಂಬ ಸದಸ್ಯರ ಕೂಲಿ, ನೆಲದ ಬಾಡಿಗೆ, ಬಂಡವಾಳದ ಮೇಲಿನ ಬಡ್ಡಿ ಸೇರಿ ಪ್ರತಿಯೊಂದನ್ನೂ ಗಣನೆಗೆ ತೆಗೆದುಕೊಂಡು ಉತ್ಪಾದನಾ ವೆಚ್ಚ ಅಂದಾಜಿಸಬೇಕು. ಇದರಂತೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. 

Stay up to date on all the latest ರಾಜ್ಯ news
Poll
Online education learning

ಆನ್‌ಲೈನ್ ಕಲಿಕೆಯ ಪ್ರಯೋಗವು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಹಾರ್ವರ್ಡ್ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp