ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ: ರಾಜ್ಯ ಸರ್ಕಾರಕ್ಕೆ 'ಹೈ' ನೋಟಿಸ್

ಕೊರೋನಾ ಕುರಿತು ಕೇಂದ್ರ ಸರ್ಕಾರ ನೀಡಿದ್ದ ಮಾರ್ಗಸೂಚಿ ಅನುಸರಿಸಲು ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಮಾಹಿತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಕುರಿತು ಕೇಂದ್ರ ಸರ್ಕಾರ ನೀಡಿದ್ದ ಮಾರ್ಗಸೂಚಿ ಅನುಸರಿಸಲು ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಮಾಹಿತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚಿಸಿದೆ. 

ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯ ಬಿಡುಗಡೆಗೊಳಿಸಿದ್ದ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿಲ್ಲ. ಹಲವಡೆ ನಿಯಮಗಳ ಉಲ್ಲಂಘನೆಯಾಗುತ್ತಿದೆ ಎಂದು ಹೇಳಿ ನಗರದ ಲೆಟ್ಸ್ ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಪರಿಶೀಲನೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಹಾಗೂ ನ್ಯೂಯಮೂರ್ತಿ ಇಎಸ್ ಇಂದಿರೇಶ್ ಅವರಿದ್ದ ಪೀಠ, ಕೇಂದ್ರ ಸಚಿವಾಲಯ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದರೂ ರಾಜ್ಯದಲ್ಲಿ ಯಾವ ರೀತಿಯ ಸಾಮಾಜಿಕ ಒಗ್ಗೂಡುವಿಕೆ ಹಾಗೂ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗುತ್ತಿದೆ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. 

ಅಲ್ಲದೆ, ರಾಜ್ಯದಲ್ಲಿ ಹೋಟೆಲ್, ರೆಸ್ಟೋರೆಂಟ್, ದೇಗುಲ ಹಾಗೂ ಮಾಲ್ ಗಳ ತೆರೆಯಲು ಅನುಮತಿ ನೀಡಲಾಗಿದೆ. ಈ ವೇಳೆ ರಾಜ್ಯ ಸರ್ಕಾರ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಕುರಿತು ಮಾಹಿತಿ ನೀಡಿ ಎಂದು ಸೂಚಿಸಿದೆ. ಅಲ್ಲದೆ, ಕೇಂದ್ರ ಸರ್ಕಾರ ಮಾರ್ಗಸೂಚಿಯಂತೆ ರಾತ್ರಿ 7 ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿ ಮಾಡಬೇಕು ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತಂತೆಯೂ ಮಾಹಿತಿ ನೀಡಿ ಎಂದು ಕೇಳಿದ್ದು, ಮುಂದಿನ ವಿಚಾರಣೆಯನ್ನು ಜೂ.12ಕ್ಕೆ ಮುಂದೂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com