ನಾಳೆಯಿಂದ ಕೊಡಗಿನಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ!

ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಭಾನುವಾರದವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಳದಿ ಮತ್ತು ಕಿತ್ತಳೆ ಎಚ್ಚರಿಕೆಯನ್ನು ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಭಾನುವಾರದವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಳದಿ ಮತ್ತು ಕಿತ್ತಳೆ ಎಚ್ಚರಿಕೆಯನ್ನು ನೀಡಿದೆ.

ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಭಾನುವಾರದವರೆಗೆ ಐಎಂಡಿ ಮುನ್ಸೂಚನೆ ನೀಡಿದ್ದರಿಂದ ಹಳದಿ ಮತ್ತು ಕಿತ್ತಳೆ ಎಚ್ಚರಿಕೆ ಸದ್ದು ಮಾಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಗಾರು ಮಳೆ ಜಿಲ್ಲೆಯಲ್ಲಿ ಗುರುವಾರದಿಂದಲೇ ಸುರಿಯಲಾರಂಭಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 12 ರಂದು ಸುಮಾರು 64 ಮಿ.ಮೀ.ನಿಂದ 115 ಮಿ.ಮೀ., ಜೂನ್ 13 ರಂದು 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಜನರು ಹೊರಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. 

ಮುನ್ಸೂಚನೆಯ ನಂತರ, ಕೊಡಗು ಜಿಲ್ಲಾಡಳಿತ ಮರಳು ಮತ್ತು ಮರದ ದಿಮ್ಮಿಗಳನ್ನು ಸಾಗಿಸುವ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಇವಲ್ಲದೆ, ಮಲ್ಟಿ-ಆಕ್ಸಲ್ ಟ್ರಕ್ ಮತ್ತು ಟ್ಯಾಂಕರ್‌ಗಳನ್ನು ಸಹ ನಿಷೇಧಿಸಲಾಗಿದೆ.

ಭಾರಿ ವಾಹನಗಳ ನಿರಂತರ ಸಂಚಾರದಿಂದ ಭೂಕುಸಿತಗಳು ಸಂಭವಿಸಿ ರಸ್ತೆಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್‍ ಕಣ್ಮಣಿ ಜಾಯ್ ಗುರುವಾರ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com