ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ: ಮಾಧುಸ್ವಾಮಿ

ಕೊರೋನಾ ಭೀತಿಯಿಂದಾಗಿ ಚುನಾವಣೆ ನಡೆಸುವುದು ಕಷ್ಟವಾಗಿರುವುದರಿಂದ ರಾಜ್ಯದ ಎಲ್ಲಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಜೆಸಿ ಮಾಧುಸ್ವಾಮಿ
ಜೆಸಿ ಮಾಧುಸ್ವಾಮಿ

ಬೆಂಗಳೂರು: ಕೊರೋನಾ ಭೀತಿಯಿಂದಾಗಿ ಚುನಾವಣೆ ನಡೆಸುವುದು ಕಷ್ಟವಾಗಿರುವುದರಿಂದ ರಾಜ್ಯದ ಎಲ್ಲಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಕೊರೊನಾ ಇರುವುದರಿಂದ ಸಕಾಲದಲ್ಲಿ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಪಂಚಾಯಿತಿಗಳ ಅವಧಿ ಪೂರ್ಣಗೊಂಡಿರುವುದರಿಂದ ಆಡಳಿತಾಧಿಕಾರಿ ನೇಮಿಸಲು ಸರಕಾರ ನಿರ್ಧರಿಸಿದೆ. ಜತೆಗೆ ಮುಂದಿನ 2ರಿಂದ 3 ತಿಂಗಳಲ್ಲಿ ಚುನಾವಣೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುವಂತೆಯೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. 6 ತಿಂಗಳ ಒಳಗೆ ಚುನಾವಣೆ
ನಡೆಸಲಾಗುತ್ತದೆ ಎಂದು ಸಂಪುಟ ಸಭೆಯ ವಿವರ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಗ್ರಾಮ ಚಂಚಾಯಿತಿಗಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು. ಆದರೆ, ಸರ್ಕಾರ ಈ ವರೆಗೆ ಚುನಾವಣೆ ನಡೆಸಲು ಮುಂದಾಗಿಲ್ಲ. ಹೀಗಾಗಿ ವಿರೋಧ ಪಕ್ಷಗಳು ಕಳೆದ ಹಲವು ದಿನಗಳಿಂದ ಚುನಾವಣೆಗೆ ಆಗ್ರಹಿಸುತ್ತಿದ್ದಾರೆ. 

"ರಾಜ್ಯದಲ್ಲಿ ಅವಧಿ ಮೀರಿರುವ ಎಲ್ಲಾ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನೂ ಶೀಘ್ರದಲ್ಲಿ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಹೀಗಾಗಿ ಶೀಘ್ರದಲ್ಲಿ ಚುನಾವಣೆ ನಡೆಯಲಿದೆ. ಆದರೆ, ಚುನಾವಣೆ ನಡೆಯುವವರೆಗೆ ಜಿಲ್ಲಾಧಿಕಾರಿ ಮಟ್ಟದಲ್ಲಿ ಪ್ರತಿಯೊಂದು ಪಂಚಾಯತಿಗಳಿಗೂ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಈ ಕುರಿತು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೆ, ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶಿಸಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com